ಬೆಂಗಳೂರು: ದಶಕಗಳ ಹಿಂದೆ ಸರ್ಕಾರದಿಂದ ಭೂ ಮಂಜೂರಾಗಿದ್ದರೂ, ಪಕ್ಕಾ ದಾಖಲೆಗಳಲ್ಲಿದೆ ಪರಿತಪಿಸುತ್ತಿದ್ದ ರೈತರಿಗೆ ಈ ವರ್ಷಾಂತ್ಯದೊಳಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಪೋಡಿ ದುರಸ್ಥಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಈ ಮೂಲಕ ರಾಜ್ಯದಲ್ಲಿ ಪಕ್ಕಾ ದಾಖಲೆಗಳಲ್ಲದೇ ದಶಕಗಳಿಂದ ಭೂಮಿ ಉಳುಮೆ ಮಾಡುತ್ತಿರುವಂತ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ರೈತರಿಗೆ ಕಳೆದ 60 ವರ್ಷಗಳಿಂದ ನಾನಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಭೂ ಮಂಜೂರಾಗಿದೆ. ಆದರೆ, ರೈತರು ಆ ಜಮೀನಿನಲ್ಲಿ ಅನುಭೋಗದಲ್ಲಿದ್ದಾರೆ, ಪಹಣಿಯಲ್ಲಿ ಅವರ ಹೆಸರಿದೆ ಎಂಬುದನ್ನು ಬಿಟ್ಟರೆ ಬೇರೆ ಯಾವ ದಾಖಲೆಗಳೂ ಇಲ್ಲ. ಇದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ರೈತರು ಪಕ್ಕಾ ದಾಖಲೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಕಳೆದ ಜನವರಿ ತಿಂಗಳಿಂದ ರಾಜ್ಯಾದ್ಯಂತ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಆದರೆ, ಕಳೆದ ಒಂದೂವರೆ ವರ್ಷದಿಂದ ಕಂದಾಯ ಮತ್ತು ಸರ್ವೇ ಇಲಾಖೆ ಒಟ್ಟಾಗಿ ಸಾಕಷ್ಟು ಅಧ್ಯಯನ ನಡೆಸಿ ಪೋಡಿ ದುರಸ್ಥಿ ಕೆಲಸಕ್ಕೆ ಸರಳೀಕೃತ ನಿಯಮ ರಚಿಸಿ ಅಧಿಸೂಚನೆ ಹೊರಡಿಸಲಾಗಿತ್ತು ಎಂದರು.
ಮುಂದುವರೆದು, ಕಳೆದ ಸರ್ಕಾರದ ಅವಧಿಯಲ್ಲಿ ಐದು ವರ್ಷದಲ್ಲಿ ಕೇವಲ 5800 ಜನರಿಗೆ ಮಾತ್ರ ಪೋಡಿ ದುರಸ್ಥಿ ಮಾಡಿಕೊಡಲಾಗಿತ್ತು. ಆದರೆ, ಪ್ರಸ್ತುತ ಕಳೆದ ಜನವರಿಯಿಂದ ಈವರೆಗೆ 88,886 ಮಂಜೂರಿದಾರರದ್ದು ನಾವೇ ಖುದ್ದಾಗಿ ಮನೆ ಮನೆಗೆ ತೆರಳಿ 1-5 ದಾಖಲೆ ಸಿದ್ದಪಡಿಸಿದ್ದೇವೆ. ಈ ಪೈಕಿ 30,476 ಪ್ರಕರಣಗಳಲ್ಲಿ ಸರ್ವೇ ಇಲಾಖೆಯಿಂದ ಅಳತೆ ಕೆಲಸವನ್ನೂ ಕೈಗೆತ್ತಿಕೊಂಡಿದ್ದೇವೆ. ಪ್ರತಿ ತಿಂಗಳೂ 5,000 ಪ್ರಕರಣಗಳಲ್ಲಿ ಸರ್ವೇ ಕೆಲಸ ಮಾಡಬೇಕು ಎಂಬ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಎಲ್ಲಾ ಸರ್ಕಾರಿ ಜಮೀನುಗಳು ಮೂರು-ನಾಲ್ಕು ತಲೆ ಮಾರುಗಳ ಹಿಂದೆ ಮಂಜೂರಾಗಿದ್ದು, ಪ್ರತಿ ಅರ್ಜಿಯ ಹಿಂದೆಯೂ 5 ರಿಂದ 15 ಜನ ವಾರಸುದಾರರಿದ್ದಾರೆ. ಎಲ್ಲರಿಗೂ ಪೋಡಿ ದುರಸ್ಥಿ ಮಾಡಿ ಈ ವರ್ಷಾಂತ್ಯದಲ್ಲಿ ಪಕ್ಕಾ ದಾಖಲೆ ಮಾಡುವ ಗುರಿ ಇದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಂದಾಗಿ ಕೆಲವು ಪ್ರಕರಣಗಳು ಬಾಕಿ ಉಳಿದರೆ, ಮುಂದಿನ ವರ್ಷದೊಳಗೆ ಎಲ್ಲಾ ಪ್ರಕರಣಗಳನ್ನೂ ಮುಗಿಸಲು ಯತ್ನಿಸಲಾಗುವುದು ಎಂದರು.
Stock Market Today: ಷೇರು ಹೂಡಿಕೆದಾರರಿಗೆ ಬಿಗ್ ಶಾಕ್: ನಿಫ್ಟಿ 24,000, ಸೆನ್ಸೆಕ್ಸ್ 670 ಅಂಕ ಕುಸಿತ