Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ‘ಬಗರ್ ಹುಕುಂ ಸಾಗುವಳಿ ಚೀಟಿ’ ನಿರೀಕ್ಷಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಗುಡ್ ನ್ಯೂಸ್
KARNATAKA

Good News: ‘ಬಗರ್ ಹುಕುಂ ಸಾಗುವಳಿ ಚೀಟಿ’ ನಿರೀಕ್ಷಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಗುಡ್ ನ್ಯೂಸ್

By kannadanewsnow0914/03/2025 6:34 AM

ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಭೆಗಳನ್ನು ನಡೆಸಲಾಗಿದ್ದು, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಶೈಲೇಂದ್ರ ಬೆಲ್ದಾಳೆ, “ರಾಜ್ಯದಲ್ಲಿ ಎಲ್ಲೂ ಸರಿಯಾಗಿ ಬಗರ್ ಹುಕುಂ ಸಮಿತಿ ರಚಿಸಿಯೇ ಇಲ್ಲ. ಬೀದರ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು, ಆ ಕಾರಣಕ್ಕಾಗಿಯೇ ಸರ್ಕಾರ ಈವರೆಗೂ ಬಗರ್ ಹುಕುಂ ಸಮಿತಿ ಸಚಿಸಿಲ್ಲವೇ..? ಎಂದು ಮರುಪ್ರಶ್ನೆ ಹಾಕಿದರು.

ಶಾಸಕರ ಅನುಮಾನಗಳಿಗೆ ಸಮಂಜಸ ಉತ್ತರದ ಮೂಲಕ ತೆರೆ ಎಳೆಯಲು ಮುಂದಾದ ಸಚಿವರು, “ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಮಿತಿ ರಚನೆ ಆಗಿಲ್ಲ, ಆಗಬೇಕು ಎಂದು ಒಪ್ಪಿಕೊಳ್ಳುತ್ತೇನೆ. ಅಲ್ಲದೆ, ಆದಷ್ಟು ಶೀಘ್ರದಲ್ಲಿ ಅವರ ಕ್ಷೇತ್ರದಲ್ಲಿ ಸಮಿತಿ ರಚನೆಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ. ಆದರೆ, ರಾಜ್ಯಾದ್ಯಂತ ಎಲ್ಲೂ ಬಗರ್ ಹುಕುಂ ಸಮಿತಿಯೇ ರಚನೆಯಾಗಿಲ್ಲ ಎಂದು ಆಧಾರವಿಲ್ಲದೆ ಹೇಳುವುದು ಸರಿಯಲ್ಲ. ರಾಜ್ಯಾದ್ಯಂತ ದಾಖಲೆಯ 185 ಸಮಿತಿ ರಚನೆ ಆಗಿದೆ. ಆರ್ಟಿಐ ನಲ್ಲಿ ಪ್ರಶ್ನೆ ಕೇಳಿದರೂ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸವಾಲೆಸೆದರು.

ಮುಂದುವರೆದು, “ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಷ್ಟೇ ಅಲ್ಲ, ಏಳೂ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿಲ್ಲ. ಅಲ್ಲದೆ, ರಾಜ್ಯದ ಇನ್ನೂ 13 ಕ್ಷೇತ್ರಗಳಲ್ಲಿ ಸಮಿತಿ ರಚನೆ ಕೆಲಸ ಬಾಕಿ ಇದೆ. ಈ ಸಂಬಂಧ ನಾನು ಅವರಿವರ ಮೇಲೆ ಸಬೂಬು ಹೇಳುವುದಿಲ್ಲ. ಏಕೆಂದರೆ ಇದು ನನ್ನ ಜವಾಬ್ದಾರಿ. ಹೀಗಾಗಿ ಬೀದರ್ ದಕ್ಷಿಣ ಸೇರಿದಂತೆ ಬಗರ್ ಹುಕುಂ ಸಮಿತಿ ರಚನೆಗೆ ಬಾಕಿ ಇರುವ ಎಲ್ಲಾ ಕ್ಷೇತ್ರದಲ್ಲೂ ಮುಂದಿನ ಹತ್ತು ದಿನಗಳಲ್ಲಿ ಸಮಿತಿ ರಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಉತ್ತರಿಸಿದರು.

*ಅರ್ಜಿ ವಿಲೇಯಾಗದೆ ರೈತರಿಗೆ ತೊಂದರೆ ಸಲ್ಲ..!*

ಬಗರ್ ಹುಕುಂ ಯೋಜನೆಯ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57 ಅರ್ಜಿ ವಿಲೇವಾರಿಯಾಗದೆ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದು ಅಥವಾ ಒಕ್ಕಲೆಬ್ಬಿಸುವಂತಿಲ್ಲ. ರಾಜ್ಯದಲ್ಲಿ ಇಂತಹ ಯಾವುದೇ ಪ್ರಕರಣ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು.

ಈ ಬಗ್ಗೆಯೂ ವಿಸ್ಕೃತ ಮಾಹಿತಿ ನೀಡಿದ ಅವರು, “ರೈತರು ಭೂ ಮಂಜೂರಾತಿಗಾಗಿ ನಮೂನೆ 53, ನಮೂನೆ 57 ಅರ್ಜಿ ಹಾಕಿದ್ದರೆ, ಅರ್ಜಿ ಇತ್ಯರ್ಥ ಆಗುವ ಮೊದಲು ಅವರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೆ, ಅರ್ಜಿ ಹಾಕಿರುವ ಕಡೆ ಬೆಳೆ ತೆಗೆದುಕೊಳ್ಳಲೂ ಸಹ ಅಧಿಕಾರಿಗಳು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನನ್ನು ರೂಪಿಸಲಾಗಿದೆ. ಭಾಗಶಃ ಬಗರ್ ಹುಕುಂ ಯೋಜನೆಗೆ ಸಂಬಂಧಿಸಿ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತು ಸುತ್ತೋಲೆ ಹೊರಡಿಸಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.