ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಸುಮಾರು 12 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಆಶಾ ಭೋಸ್ಲೆ, ಭಾರತೀಯರ ಮನೆ ಮಾತಾಗಿದ್ದರು. ಅದ್ಭುತ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದರು. ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ, ಪದ್ಮ ವಿಭೂಷಣ ಸೇರಿದಂತೆ ದೇಶದ ಅತ್ಯುನ್ನತ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರ ನಿಧನ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ 80 ವರ್ಷಗಳಿಂದ ಭಾರತೀಯ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಆಶಾ ಬೋಸ್ಲೆ ಅವರ ನಿಧನದಿಂದ ಭಾರತೀಯ ಚಿತ್ರರಂಗ ಬಡವಾಗಿದೆ. ಅವರ ಸಾವಿನ ನೋವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳಿಗೆ, ಕುಟುಂಬ ವರ್ಗದವರಿಗೆ ಆ ದೇವರು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ
ಸಿಹಿಯಾದ ಡೆಸರ್ಟ್ ಜೊತೆಗೆ 40 ಗ್ರಾಂ ಪ್ರೋಟೀನ್! ಇಲ್ಲಿದೆ ಗ್ರೀಕ್ ಯೋಗರ್ಟ್‌ನ ಆರೋಗ್ಯಕರ ರೆಸಿಪಿ








