Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

SHOCKING : `ಕಾಲಿಗೆ ಬೀಳ್ತೀನಿ ಸಾರ್, ಒಂದು ಗಾಂಜಾ ಪ್ಯಾಕೆಟ್ ಕೊಡಿಸಿ’ : ಟವರ್ ಏರಿ ಯುವಕನ ಹೈಡ್ರಾಮಾ | WATCH VIDEO

BREAKING : ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ
KARNATAKA

ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ

By kannadanewsnow57

ಸವದತ್ತಿ : ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿ.ಎಂ.ಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿ.ಎಂ.ಸಿ ಹೀಗೆ ಒಟ್ಟಾರೆಯಾಗಿ 30.842 ಟಿ.ಎಂ.ಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ.

ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆಬ್ರವರಿ 14ರ ವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ.

ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾರ್ಚ 15ರವರೆಗೆ ಮುಂದುವರಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆಬ್ರವರಿ 15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾರ್ಚ್ 1ರ ವರೆಗೆ ನೀರಾವರಿ ಕಾಲುವೆಗಳ ಮುಖಾಂತರ ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಅಲ್ಲದೆ, ಅವಶ್ಯಕ ಕುಡಿಯುವ ನೀರಿಗಾಗಿ ಜೂನ್ ಅಂತ್ಯದವರೆಗೆ 15 ಟಿ.ಎಂ.ಸಿ ನೀರನ್ನು ಕಾಯ್ದಿರಿಸಿ ಒದಗಿಸಲು ಸಚಿವರು ಸೂಚಿಸಿದ್ದಾರೆ. ಜೊತೆಗೆ, ಮಾರ್ಚ್ 1ರೊಳಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕುಡಿಯುವ ನೀರಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದೂ ಸಚಿವರು ಸೂಚಿಸಿದ್ದಾರೆ.

ಪ್ರಸಕ್ತ ಬೇಸಿಗೆಯ ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಬೇಡಿಕೆ ಹೆಚ್ಚಾಗುವುದರಿಂದ ಹಿತ- ಮಿತವಾಗಿ ನೀರನ್ನು ಬಳಸುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ನವಿಲುತೀರ್ಥದ ಅಧೀಕ್ಷಕ ಅಭಿಯಂತರ ವಿ.ಎಸ್. ಮಧುಕರ ಮನವಿ ಮಾಡಿದ್ದಾರೆ. ಜೊತೆಗೆ, ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

Minister Lakshmi Hebbalkar responds to farmers' plea orders release of water from Malaprabha dam for 15 more days
Share. Facebook Twitter LinkedIn WhatsApp Email

Related Posts

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

1 Min Read

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ನೂತನ ಅಬಕಾರಿ ಸುಂಕ ಜಾರಿ ಮಾಡಿದ ರಾಜ್ಯ ಸರ್ಕಾರ!

1 Min Read

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

2 Mins Read
Recent News

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

SHOCKING : `ಕಾಲಿಗೆ ಬೀಳ್ತೀನಿ ಸಾರ್, ಒಂದು ಗಾಂಜಾ ಪ್ಯಾಕೆಟ್ ಕೊಡಿಸಿ’ : ಟವರ್ ಏರಿ ಯುವಕನ ಹೈಡ್ರಾಮಾ | WATCH VIDEO

BREAKING : ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ನೂತನ ಅಬಕಾರಿ ಸುಂಕ ಜಾರಿ ಮಾಡಿದ ರಾಜ್ಯ ಸರ್ಕಾರ!

State News
KARNATAKA

ಕೊರಗಜ್ಜನ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

By kannadanewsnow57 KARNATAKA 1 Min Read

ಮಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟಿ, ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಅವರು ತುಳುನಾಡಿನ ಆರಾಧ್ಯ ದೈವವಾದ ಸ್ವಾಮಿ ಕೊರಗಜ್ಜನಿಗೆ ಹರಕೆ…

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ನೂತನ ಅಬಕಾರಿ ಸುಂಕ ಜಾರಿ ಮಾಡಿದ ರಾಜ್ಯ ಸರ್ಕಾರ!

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

BIG NEWS : ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.