ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದರು.
BREAKING: ನ.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಪ್ರಮಾಣವಚನ ಸ್ವೀಕಾರ
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








