ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.
ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್