ಬೆಂಗಳೂರು: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೆ ಆಯಾಯ ಡಿಡಿ, ಸಿಡಿಪಿಓಗಳನ್ನು ಸಸ್ಪೆಂಡ್ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ – ಪೂರ್ವ ಪ್ರಾಥಮಿಕ ಕೇಂದ್ರ (ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಮಕ್ಕಳ ಭವಿಷ್ಯಕ್ಕೆ ನಮ್ಮ ಸರ್ಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ನಮ್ಮ ಇಲಾಖೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ಕೃಷ್ಟವಾದ ಯೋಜನೆಗಳನ್ನು ಜನರಿಗೆ ನೀಡಲಿದೆ. ಇದಕ್ಕೆ ತಕ್ಕಂತೆ, ನೀವು ಕೂಡ ನಿಮ್ಮ ಕೌಶಲ್ಯ ಹೆಚ್ಚಿಸಿಕೊಂಡು, ಗುಣಮಟ್ಟದ ಶಿಕ್ಷಣ ನೀಡಲು ಸನ್ನದ್ದರಾಗಬೇಕು. ಅಂಗನವಾಡಿಗೆ ಬರುವ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳಂತೆ ಬೆಳೆಸಬೇಕು ಎಂದು ಅಂಗನವಾಡಿ ಕಾರ್ಯಕರ್ತರಿಗೆ ಸಚಿವರು ಸಲಹೆ ನೀಡಿದರು.
ರಾಜ್ಯಾದ್ಯಂತ 5 ಸಾವಿರ ಮಾಂಟೆಸ್ಸರಿಗಳ ಆರಂಭ
ಸರ್ಕಾರಿ ಮಾಂಟೆಸ್ಸರಿಗಳನ್ನು ಈಗ ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ನಮ್ಮ ಇಲಾಖೆ ಸನ್ನದ್ಧವಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಲ್ಲಿ ಪ್ರಾಯೋಗಿಕವಾಗಿ ‘250 ಮಾಂಟೆಸ್ಸರಿ’ಗಳಿಗೆ ಚಾಲನೆ: ರಾಜ್ಯಾದ್ಯಂತ ‘5,000 LKG, UKG ಶಾಲೆ’ ಆರಂಭ
ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK