ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಬೆನ್ನಲ್ಲೇ ಸಚಿವ ಎಂ.ಬಿ ಪಾಟೀಲ್ ಅವರ ವಿರುದ್ಧದ ಸಿಎ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ಈ ದೂರು ಆಧರಿಸಿ ಮಾಹಿತಿ ನೀಡುವಂತೆ ಸಿಎಸ್ ಗೆ ಪತ್ರ ಬರೆಯಲಾಗಿದೆ.
ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ಸಿಎ ಸೈಟ್ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಈ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಕೋರಿದ್ದಾರೆ.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಈಗ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸಿಎ ಸೈಟ್ ಹಂಚಿಕೆ ಹಗರಣದಲ್ಲಿ ಪ್ರಾಸಿಕ್ಯೂಷನ್ ಸಂಕಷ್ಟ ಎದುರಾಗಿದೆ. ಹಾಗಾದ್ರೆ ರಾಜ್ಯಪಾಲರು ಎಂ.ಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
BREAKING: ಜೈಲಲ್ಲಿರುವ ‘ನಟ ದರ್ಶನ್’ಗೆ ‘ಸರ್ಜಿಕಲ್ ಚೇರ್’ ನೀಡಲು ಅನುಮತಿ | Actor Darshan
BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!
ಸಾರ್ವಜನಿಕರೇ ಗಮನಿಸಿ : `ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್ ಗೆ ಸೆ.14 ಕೊನೆಯ ದಿನ!