ಶಿವಮೊಗ್ಗ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಇಂದು ಸೊರಬಾ ವಿಧಾನ ಸಭಾ ಕ್ಷೇತ್ರದ ಸೊರಬದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಶ್ವಮೇಧ ಬಸ್ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಬಸ್ ಸಾಗರ – ಸೊರಬ – ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಇಂದು ಹೊಳೆಹೊನ್ನೂರು ಗ್ರಾಮದ ಸಮುದಾಯ ಭವನದಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷ ಸಂಘಟನೆ ಹಾಗೂ ರಾಜಕೀಯ ವಿದ್ಯಮಾನಗಳ” ಕುರಿತು ಮಾತನಾಡಿದರು.
ಈಡೀ ದೇಶದಲ್ಲಿಯೇ
ನುಡಿದಂತೆ ನಡೆದಿರುವ ಪಕ್ಷ…
ನಮ್ಮ ಕಾಂಗ್ರೆಸ್ ಪಕ್ಷ…
ಇದು ಬಡವರ ಪಕ್ಷ…
ಚುನಾವಣೆಯಲ್ಲಿ ಹೇಳಿದಂತೆ ಐದೂ ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ನಮ್ಮ ದೇಶದ ರೈತರಿಗಾಗಿ, ಕಡು ಬಡವರಿಗಾಗಿ, ಕೂಲಿ ಕಾರ್ಮಿಕರಿಗಾಗಿ, ನಿರುದ್ಯೋಗಿ ಯುವಕರಿಗೆ, ಮಹಿಳೆಯರ ಏಳಿಗೆಗಾಗಿ ನಮ್ಮ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಆದರೇ ವಿರೋಧ ಪಕ್ಷಗಳು ನಮ್ಮ ಮೇಲೆ ಟೀಕೆ ಮಾಡುತ್ತಿವೆ ಅವುಗಳಿಗೆ ಕಿವಿಕೊಡದೆ ನಮ್ಮ ಪಕ್ಷದ ಕಾರ್ಯಕರ್ತರು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಇನ್ನಷ್ಟು ಸಕ್ರಿಯರಾಗಿ ಕಾರ್ಯ ನಿರ್ವಹಿಸಬೇಕು. ಮುಂಬರುವ ಚುನಾವಣೆಗೆ ಈಗಲಿಂದಲೇ ಸಿದ್ದರಾಗಬೇಕು ಎಂದು ತಿಳಿಸಿದರು.
ಬಳಿಕ ಕಾರ್ಯಕರ್ತರ ಹಾಗೂ ಮುಖಂಡರ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು, ಮುಖಂಡರು, ಮಹಿಳಾ ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡರುಗಳು ಉಪಸ್ತಿತರಿದ್ದರು.
ಹೊಸಪೇಟೆಯಲ್ಲಿ ಸುರಕ್ಷತೆ ಮತ್ತು ಅಭಿವೃದ್ಧಿ ಕಾರ್ಯ, ವಿಂಡೋ ಟ್ರೇಲಿಂಗ್ ತಪಾಸಣೆ ಮಾಡಿದ ನೈರುತ್ಯ ರೈಲ್ವೆ GM
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence