ಶಿವಮೊಗ್ಗ: ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್ ಆಫಿಸರ್ ದಿ. ಜಿ.ಎಸ್ ಮಂಜುನಾಥ್ (36) ಅವರ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ಅತ್ಯಂತ ನೋವಿನ ಸಂಗತಿಯಾಗಿದ್ದು, ಭಗವಂತನು ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಚಿರಸ್ಮರಣೆಯಲ್ಲಿದ್ದು, ಅವರ ಕುಟುಂಬ ಸದಸ್ಯರ ಜೊತೆಗೆ ನಾವಿದ್ದೇವೆ ಎಂದು ಧೈರ್ಯತುಂಬಿ ಭರವಸೆ ನೀಡಿಲಾಯಿತು.
ಬಳಿಕ ಸ್ಥಳೀಯ ಗ್ರಾಮಸ್ಥರು ಮಂಜುನಾಥ್ ಅವರ ಶಾಶ್ವತ ನೆನಪಿಗಾಗಿ ಗ್ರಾಮದಲ್ಲಿ ಪುತ್ಥಳಿ ನಿರ್ಮಾಣ ಹಾಗೂ ವಿದ್ಯಾಭ್ಯಾಸ ಮಾಡಿದ ಶಾಲಾ ಅಭಿವೃದ್ಧಿ ಹಾಗೂ ನೂತನ ಕೊಠಡಿ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿ ಶೀಘ್ರದಲ್ಲಿಯೇ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ