ಬೆಳಗಾವಿ ಸುವರ್ಣಸೌಧ: ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷೆ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ ಎಂದರು.
ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ನಿಯಮ-4ರ ತಿದ್ದುಪಡಿಯಲ್ಲಿ ಉಪನಿಯಮ-7 ರನ್ವಯ ವಾರ್ಡ್‍ಗಳ ಮರು ವಿಂಗಡಣೆಯಾಗಿದ್ದು, ಆಯಾ ವಾರ್ಡ್ ಗಳಲ್ಲಿ ಸರ್ಕಾರಿ /ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ 12(1)(ಸಿ) ರನ್ವಯ ಪ್ರವೇಶಾತಿ ಅನ್ವಯಿಸುವುದಿಲ್ಲ ಎಂದರು.
ನರೇಗಾ ಹೆಸರು, ಸ್ವರೂಪ ಬದಲಿಸುವ ಮೂಲಕ ಪ್ರಧಾನಿ ಮೋದಿ ಗಾಂಧೀಜಿ ಬಗೆಗಿನ ತಮ್ಮ ದ್ವೇಷ ತಾವೇ ಬಯಲು: ಸಿಎಂ ಸಿದ್ಧರಾಮಯ್ಯ
ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ








