ಶಿವಮೊಗ್ಗ: ಇಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಮಹತ್ವದ ಜನಸ್ಪಂದನ ಸಭೆ ನಡೆಸಿದರು. ಇಂದಿನ ಜನಸ್ಪಂದನ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲವುಗಳನ್ನು ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ “ರಂಗನಾಥ ಕಲ್ಯಾಣ ಮಂಟಪ”ದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನಸ್ಪಂದನ ಸಭೆ” ಯಲ್ಲಿ ಪಾಲ್ಗೊಂಡು, ಜನರಿಂದ ನೇರವಾಗಿ ಅಹವಾಲು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಯಿತು.
ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಲವಾರು ದೂರುಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಅನೇಕರಿಗೆ ಪರಿಹಾರ ಒದಗಿಸಲಾಯಿತು.
ಬಳಿಕ 94.C ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಹಲವು ಅರ್ಜಿದಾರರಿಗೆ ಸಂದ್ಯಾಸುರಕ್ಷಾ ಪಿಂಚಣಿ ಪತ್ರ, ಅಂಗವಿಕಲ ಪೋಷಣಾ ವೇತನ ಪತ್ರವನ್ನು ವಿತರಿಸಲಾಯಿತು.
ಸುಮಾರು 150 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಕಾಲ ಮಿತಿಯೊಳಗೆ ಎಲ್ಲರ ಸಮಸ್ಯೆ ಬಗೆಹರಿಸಿ ಸೂಕ್ತ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಈ ವೇಳೆ ಸಾಗರ ಉಪವಿಭಾಗಾಧಿಕಾರಿಗಳಾದ ಯತೀಶ್, ಸಾಗರ ಇಒ ಗುರುಕೃಷ್ಣ ಶಣೈ, ತಹಶೀಲ್ದಾರ್ ಚಂದ್ರಶೇಖರ್, ಯೋಜನಾ ಅಧಿಕಾರಿ ಶಶಿರೇಖಾ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ‘BMTC ನಿರ್ವಾಹಕ ಹುದ್ದೆ’ಗಳ ನೇಮಕಾತಿಯ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024