ಬೆಂಗಳೂರು: ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಔನ್ನತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಮ್ಮೆಲ್ಲರ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ ಡಾ. ಕೆ.ಕಸ್ತೂರಿ ರಂಗನ್ ಅವರ ಅಗಲಿಕೆ ನಿಜಕ್ಕೂ ದುಃಖ ತಂದಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಸಂತಾಪ ವ್ಯಕ್ತಪಡಿಸಿದ್ದಾರೆ.
ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿಯಾಗಿ, ಇಸ್ರೋ ಮುಖ್ಯಸ್ಥರಾಗಿ, ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಅವರು ನೀಡಿರುವ ಕೊಡುಗೆ ಅನನ್ಯ, ಅವಿಸ್ಮರಣೀಯ. ನಮ್ಮ ಬಾಹ್ಯಾಕಾಶ ಸಾಧನೆಯ ಹಿಂದಿನ ಧೀ ಶಕ್ತಿಯಂತಿದ್ದ ಕಸ್ತೂರಿ ರಂಗನ್ ಕ್ರಿಯಾಶೀಲ, ದೂರದೃಷ್ಟಿಯ ವಿಜ್ಞಾನಿಯಾಗಿದ್ದವರು. ಅವರ ಅಗಲಿಕೆಯಿಂದ ಬಾಹ್ಯಾಕಾಶ ಕ್ಷೇತ್ರಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಭಗವಂತ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ. ಅವರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿ: ಮೃತರ ಕುಟುಂಬದವರಿಗೆ ತಲಾ 4 ಲಕ್ಷ ಪರಿಹಾರ ಘೋಷಿಸಿದ NSE | Pahalgam Terror Attack