Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM

ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

13/02/2026 2:44 PM

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಸವಣ್ಣನನ್ನು ಅವಮಾನಿಸಿದ ಬಸನಗೌಡ ಯತ್ನಾಳ್ ಮಾತುಗಳನ್ನು ಕಟುವಾಗಿ ಖಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಬಸವಣ್ಣನನ್ನು ಅವಮಾನಿಸಿದ ಬಸನಗೌಡ ಯತ್ನಾಳ್ ಮಾತುಗಳನ್ನು ಕಟುವಾಗಿ ಖಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0929/11/2024 7:44 PM

ಬೆಂಗಳೂರು: ಬಸವಣ್ಣ ಹೊಳೆ ಹಾರಿದರು ಎಂದು ಅವಮಾನಿಸಿದ ಯತ್ನಾಳ್ ಅವರೇ, ಅಂದು ಬಸವಣ್ಣರನ್ನು ಹಿಂಸಿಸಿದವರ ಸಿದ್ಧಾಂತ ಯಾವುದು ಗೊತ್ತೇ? ಜಗಜ್ಯೋತಿ ಬಸವಣ್ಣನವರನ್ನು ಅವಮಾನಿಸಿದ ಬಸನಗೌಡ ಯತ್ನಾಳ್ ಅವರ ಮಾತುಗಳನ್ನು ಕಟುವಾಗಿ ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ ಎಂದಿದ್ದಾರೆ.

“ಬಸವಣ್ಣನವರ ಹಾಗೆ ಹೊಳೆ ಹಾರಬೇಕು“ ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ”ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ“ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂಬುದಾಗಿ ಕಿಡಿಕಾರಿದ್ದಾರೆ.

ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ. ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಎಂದು ಪ್ರಶ್ನಿಸಿದರು.

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು?
ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ?
ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು?
ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು?
ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ?
ಯಾರಿಂದ ರಕ್ಷಣೆ ಪಡೆಯಲು?
ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ?

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದಿದ್ದಾರೆ.

ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ.

ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ.… pic.twitter.com/wEEWvLL8V8

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 29, 2024

BIG NEWS: ರಾಜ್ಯ ‘ಮಹಿಳಾ ಹೋರಾಟಗಾರ್ತಿ’ಗೆ ‘ಲವ್ ಸೆಕ್ಸ್ ದೋಖಾ’

ರಾಜ್ಯದ ರೈತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ

Share. Facebook Twitter LinkedIn WhatsApp Email

Related Posts

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM2 Mins Read

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM1 Min Read

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM1 Min Read
Recent News

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM

ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

13/02/2026 2:44 PM

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM
State News
KARNATAKA

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

By kannadanewsnow0913/02/2026 2:47 PM KARNATAKA 2 Mins Read

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್…

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.