ಬೆಂಗಳೂರು: ನಾಲಿಗೆ ಹರಿಬಿಡುವುದರಲ್ಲಿ ಪ್ರಿಯಾಂಕ್ ಖರ್ಗೆಯವರು ಇಡೀ ಕಾಂಗ್ರೆಸ್ಸಿನಲ್ಲಿ ನಂಬರ್ 1 ಇದ್ದಾರೆ ಎಂದು ಟೀಕಿಸಿದರು. ಖರ್ಗೆ ಎಂಬ ಹೆಸರು ಪ್ರಿಯಾಂಕ್ ಪಕ್ಕದಲ್ಲಿ ಇಲ್ಲದೇ ಇರುತ್ತಿದ್ದರೆ ಅವರು ಮಂಡಲ ಪಂಚಾಯತ್ ಸದಸ್ಯರೂ ಆಗುತ್ತಿರಲಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗುಡುಗಿದ್ದಾರೆ.
ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ವಂಶಪಾರಂಪರ್ಯದಲ್ಲಿ ಆ ರಾಜಮನೆತನದ ಆಡಳಿತವೇ ಮತ್ತೆ ಬಂದ ಹಾಗೆ ಕಾಣುತ್ತಿದೆ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆಯವರು ಸದನದಲ್ಲಿ ಉತ್ತರ ಕೊಡಬೇಕಾದ ವೇಳೆ ಪರಾರಿಯಾಗುತ್ತಾರೆ. ಅವರ ಸಾಧನೆ ಶೂನ್ಯವಾದುದೇ ಇದಕ್ಕೆ ಕಾರಣ ಎಂದು ತಿಳಿಸಿದರು.
ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ, ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ಭಾಗವಹಿಸಿದ್ದರು.








