ಬೆಂಗಳೂರು: ಬೆಂಗಳೂರು: ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೆ ಪ್ರಪ್ರಥಮ ಬಾರಿಗೆ “ಪಂಚಮಿತ್ರ” Whatsapp Chat ನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಪಂಚಮಿತ್ರ” ಪೋರ್ಟಲ್ ಲಾಂಛನ ಲೋಕಾರ್ಪಣೆ ಮಾಡಿ ಮಾತನಾಡಿದರು.
ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ ಸೈಟ್ ಮತ್ತು ಪೆÇೀರ್ಟಲ್‍ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೆ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೆÇೀರ್ಟಲ್‍ಗಳು ಇರಲಿಲ್ಲವಾದ್ದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಿರುವ Whatsapp Chat ತಂತ್ರಜ್ಞಾನ ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು Whatsapp Chat No. 8277506000 ಮೂಲಕ ದಾಖಲಿಸಬಹುದಾಗಿದೆ.
“ಪಂಚಮಿತ್ರ ಪೋರ್ಟಲ್” ಮೂಲಕ ಗ್ರಾಮಪಂಚಾಯಿತಿಗಳ ಮಾಹಿತಿಗಳಾದ ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‍ಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು. ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾಮ ಪಂಚಾಯತ್‍ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) & 4 (1) (ಬಿ) ಆರ್‍ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ ಎಂದರು.
ಸದರಿ ಪೆÇೀರ್ಟಲ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ, ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆಯುವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ಅಡಿಯಲ್ಲಿ ಕಾರ್ಮಿಕರಿಗೆ ಜಾಬ್‍ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ / ನಿಯಮಿತಗೊಳಿಸುವಿಕೆ, ಹೊಸ / ಅಸ್ತಿತ್ವದಲ್ಲಿರುವ ಓವರ್ ಗ್ರೌಂಡ್ ಕೇಬಲ್ ಮೂಲಸೌಕರ್ಯ / ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ / ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11ಬಿ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ ಎಂದರು.
ಸರ್ಕಾರ ನಿಮ್ಮ ಮನೆಬಾಗಿಲಿಗೆ ಬಂದು ಸೇವೆ ಮಾಡುತ್ತಿದ್ದು, ಸರ್ಕಾರದ ಆಡಳಿತವನ್ನು ನಾಗರೀಕರ ಅಂಗೈಯಲ್ಲಿ ಕೊಡುತ್ತಿದ್ದೇವೆ. ನಾಗರೀಕರನ್ನು ಆಳುವ ಸರ್ಕಾರವಲ್ಲ, ನಾಗರೀಕರ ಜೊತೆ ಹೆಚ್ಚಿನ ಸಂಪರ್ಕ ಪಡೆದು ಅವರ ಅನಿಸಿಕೆ ಹಾಗೂ ಅಹವಾಲುಗಳನ್ನು ಪಡೆಯಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಇಲಾಖೆಯ ಅಧಿಕಾರಿಗಳು ಹಾಗೂ ಇ-ಆಡಳಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.