ತುಮಕೂರು: ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಟೆಂಡರ್ ಕರೆಯಲು ವಿಳಂಬ ಮಾಡಿರುವ ಬಗ್ಗೆ ಹಾಗೂ ಈ ಯೋಜನೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖೆ ತನಿಖೆ ನಡೆಸಲು ಆದೇಶಿಸಿರುವುದಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 2230 ಕೋಟಿ ವೆಚ್ಚದಲ್ಲಿ 3699 ಕಾಮಗಾರಿಗಳನ್ನ ಮಾಡಲು ಕಳೆದ ಜೂನ್ 2022 ಹಾಗೂ ಜನವರಿ 2023 ರಲ್ಲಿ ಟೆಂಡರ್ ಕರೆಯಲಾಗಿತ್ತು.
ಆದರೆ ಇದುವರೆಗೂ ಕಾಮಗಾರಿಗಳಿಗೆ ಚಾಲನೆ ದೊರೆತಿಲ್ಲ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರವೀಶ್ ಅವರು ಉದ್ದೇಶಪೂರ್ವಕವಾಗಿ ಟೆಂಡರ್ ಕರೆಯಲು ವಿಳಂಬ ಮಾಡುತ್ತಿದ್ದಾರೆ ಹಾಗೂ ಈ ಯೋಜನೆಗಳಲ್ಲಿ ಭಾರಿ ಅವ್ಯವಹಾರ ಆಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಗಮನ ಸೆಳೆಯುವ ಸೂಚನೆ ಮೂಲಕ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಶ್ನೆ ಮಾಡಿದ್ದರು.
ಇದಕ್ಕೆ ಉತ್ತರ ನೀಡಿರುವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲೆಯ ಜಲಜೀವನ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಏಕೆ ವಿಳಂಬ ಆಗಿದೆ ಹಾಗೂ ಅವ್ಯವಹಾರಗಳು ನಡೆದಿದೆಯೇ ಎಂಬುದರ ಬಗ್ಗೆ ತನಿಖೆ ಮಾಡಲು ಆದೇಶಿಸಿರುವುದಾಗಿ ಸದನಕ್ಕೆ ತಿಳಿಸಿದ್ದಾರೆ.
ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ ಕಾರ್ಯ ಪಾಲಕ ಇಂಜಿನಿಯರ್ ರವೀಶ್ ಅವರನ್ನು ಅಮಾನತು ಮಾಡಬೇಕೆಂದು ಟಿ.ಬಿ ಜಯಚಂದ್ರ ಅವರು ಒತ್ತಾಯಿಸಿದ್ದರು.
‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ
Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆಗಳ ಭರ್ತಿಗೆ ಅಧಿಸೂಚನೆ