Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ತಕ್ಷಣವೇ ಸಂಘರ್ಷ ನಿಲ್ಲಿಸಿ, ಮಾತುಕತೆಗೆ ಮುಂದಾಗಿ : ಭಾರತದ ಕಳಕಳಿ

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲುಷಿತ ನೀರು ಪ್ರಕರಣ ವರದಿಯಾದ್ರೇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
KARNATAKA

ಕಲುಷಿತ ನೀರು ಪ್ರಕರಣ ವರದಿಯಾದ್ರೇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹಾ ಕೆಲವು ಗ್ರಾಮ/ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ನೀರಿನ ತೊಟ್ಟಿ, ಜಲಾಗಾರಗಳು ಸುಸ್ಥಿಯಲ್ಲಿರಲಿ

ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಚಗೊಳಿಸುವುದು, ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಸೂಚಚನೆ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Watch Video: ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ 50 ವಿದ್ಯಾರ್ಥಿಗಳು ಮೂರ್ಛೆ: ಶಾಕಿಂಗ್ ವೀಡಿಯೋ ನೋಡಿ | Heatwave

ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ

Share. Facebook Twitter LinkedIn WhatsApp Email

Related Posts

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

1 Min Read

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

2 Mins Read
Recent News

​ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ತಕ್ಷಣವೇ ಸಂಘರ್ಷ ನಿಲ್ಲಿಸಿ, ಮಾತುಕತೆಗೆ ಮುಂದಾಗಿ : ಭಾರತದ ಕಳಕಳಿ

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

​ಎನ್‌ಡಿಎ ಆಡಳಿತದ ರಾಜ್ಯಗಳ ಸಿಎಂಗಳು ಮತ್ತು ಡಿಸಿಎಂಗಳ ಮಹತ್ವದ ಸಭೆ: ಜೂನ್ 11ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಮಾಲೋಚನೆ

State News
KARNATAKA

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ದರ ಏರಿಕೆ ಕಂಡುಬಂದಿದ್ದು, ಸಾಮಾನ್ಯ ಜನರ…

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.