ಸುಭಾಷಿತ :

Friday, April 3 , 2020 6:09 AM

ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಲು ಸರಿಯಾಗಿ ಕೆಲಸ ಮಾಡಿ : ತಪ್ಪು ಎಸಗಿದ್ರೇ.. ಅಮಾನತ್ತು – ಸಚಿವ ಆರ್ ಅಶೋಕ್ ಖಡಕ್ ಎಚ್ಚರಿಕೆ


Wednesday, January 29th, 2020 5:20 pm

ಬೆಂಗಳೂರು : ಪ್ರವಾಹದಿಂದ ಹಾನಿಗೆ ಒಳಗಾಗಿರುವ ಸೂರು ಕಳೆದುಕೊಂಡವರಿಗೆ ತ್ವರಿತವಾಗಿ ಮನೆ ನಿರ್ಮಿಸಿಸಲು ಕ್ರಮ ವಹಿಸಿ. ಸೂಕ್ತ ರೀತಿಯಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು, ಸಂತ್ರಸ್ತರ ನೆರವಿಗೆ ನೆರವಾಗಬೇಕು. ತಪ್ಪು ಎಸಗಿದ್ರೇ.. ಅಂತಹ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ,  ಪ್ರವಾಹ ಪರಿಸ್ಥಿತಿ ಉಂಟಾಗಿ ಸೂರು ಕಳೆದುಕೊಂಡವರಿಗೆ ಮನೆ ನಿರ್ಮಿಸುವ ಬಗ್ಗೆ, ಜಿಲ್ಲಾಧಿಕಾರಿಗಳೇ ಗ್ರಾಮಗಳತ್ತ ನಡೆಯಿರಿ ಎಂಬುದಾಗಿ ತಿಳಿಸಿದರು. ಅಲ್ಲದೇ ಈ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೆಲ ಖಡಕ್ ಸೂಚನೆಯನ್ನು, ಎಚ್ಚರಿಕೆಯನ್ನು ಅಧಿಕಾರಿಗಳಿಗೆ ನೀಡಿದರು.

ಪ್ರಮುಖ ಅಂಶಗಳು

* ಪ್ರವಾಹ ಹಾನಿಯಿಂದ ಸೂರು ಕಳೆದುಕೊಂಡವರಿಗೆ ತ್ವರಿತವಾಗಿ ಮನೆಗಳನ್ನು ನಿರ್ಮಿಸಿಕೊಡುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ್ದೇನೆ. ಮೂರು ತಿಂಗಳೊಳಗೆ ಮನೆ ನಿರ್ಮಿಸಿಕೊಡಬೇಕೆಂದು ಗಡುವು ನೀಡಲಾಗಿದೆ. ಮನೆ ನಿರ್ಮಾಣಕ್ಕೆ ಹಣದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸಾಕಷ್ಟು ಹಣವಿದೆ. ಮನೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.

* ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 10 ರಿಂದ 20 ಮನೆಗಳ ನಿರ್ಮಾಣದ ಮೇಲ್ವಿಚಾರಣೆಯ ಹೊಣೆ ವಹಿಸಲಾಗಿದೆ. ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ತಕ್ಷಣ ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರವಾಹದಿಂದ ಹಾನಿಗೊಳಗಾದ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕುಡಿಯುವ ನೀರಿನ ಘಟಕಗಳಿಗೂ ವಿದ್ಯುತ್ ಸಂಪರ್ಕ ನೀಡಲಾಗಿದೆ. ಶಾಲಾ ಕಟ್ಟಡಗಳ ದುರಸ್ಥಿ ಶೇ.90 ರಷ್ಟು ಮುಗಿದಿದ್ದು ಇನ್ನುಳಿದ ಶೇ.10 ರಷ್ಟು ಕೆಲಸವನ್ನು 15 ದಿನದೊಳಗೆ ಪೂರ್ಣಗೊಳಿಸಲು ಆದೇಶಿಸಲಾಗಿದೆ.

* ಆಧಾರ್ ಕಾರ್ಡ್ ಆಧರಿಸಿ ವೃದ್ಧಾಪ್ಯ ವೇತನವನ್ನು ಫಲಾನುಭವಿಗಳ ಮನೆ ಬಾಗಿಲಿಗೇ ತಲುಪಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು. ಯಾರೂ ಅರ್ಜಿ ಕೊಡಬೇಕಾದ ಅವಶ್ಯಕತೆಯಿಲ್ಲ. ಉಡುಪಿಯಲ್ಲಿ ಈ ಯೋಜನೆ ಪ್ರಯೋಗಿಕವಾಗಿ ಜಾರಿಯಾಗಲಿದ್ದು ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಉಡುಪಿಯಲ್ಲಿ 3 ಸಾವಿರ ಫಲಾನುಭವಿಗಳ ಆದೇಶ ಪತ್ರವನ್ನು ನಾನೇ ಅಂಚೆ ಪೆಟ್ಟಿಗೆಗೆ ಹಾಕಲಿದ್ದೇನೆ.

* ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆ ವ್ಯಾಪ್ತಿಯ ಹಳ್ಳಿಯೊಂದಕ್ಕೆ ತಿಂಗಳಲ್ಲಿ ಒಂದು ಬಾರಿ ತೆರಳಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಪರಿಹರಿಸಲಿದ್ದಾರೆ. ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ ಎಂಬ ಈ ಕಾಯ್ರಕ್ರಮವನ್ನು ತಿಂಗಳ ಮೂರನೇ ಶನಿವಾರ ಮಾಡಿದರೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಡಿಸಿಗಳ ಜೊತೆ ಉಪ ವಿಭಾಗಾಧಿಕಾರಿ, ತಹಶೀಲ್ದಾರ್‍ಗಳೂ ತೆರಳಲಿದ್ದಾರೆ. ನಂತರದ ಹಂತದಲ್ಲಿ ಉಪ ವಿಭಾಗಾಧಿಕಾರಿಗಳು ತಿಂಗಳಲ್ಲಿ 2 ದಿವಸ, ತಹಶೀಲ್ದಾರ್‍ಗಳು 4 ದಿವಸ ಹಳ್ಳಿಗಳತ್ತ ತೆರಳಬೇಕೆಂಬ ಬಗ್ಗೆಯೂ ಚಿಂತನೆ ಇದ್ದು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ.

* ಬಾಲ್ಯ ವಿವಾಹದ ಬಗ್ಗೆ ಅರಿವು, ಸ್ಮಶಾನಕ್ಕೆ ಜಾಗ ಮೀಸಲು, ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವುದು, ಪೌತಿ ಖಾತೆ, ಜಾತಿ ಪ್ರಮಾಣ ಪತ್ರ ಮತ್ತಿತರ ಕಾರ್ಯಗಳನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಗುವುದು. ಶೇ.90 ರಷ್ಟು ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳನ್ನು ಈ ಸಂದರ್ಭದಲ್ಲಿ ಮಾಡಲಿದ್ದು ಬೇರೆ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದಲ್ಲಿ ಅವನ್ನು ಆಯಾ ಇಲಾಖೆಗಳಿಗೆ ಕ್ರಮಕ್ಕಾಗಿ ರವಾನಿಸಲಾಗುವುದು.

* ಕಂದಾಯ ಇಲಾಖೆ ಜನಸ್ನೇಹಿ ಆಗಬೇಕು. ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ ಕಾರ್ಯಕ್ರಮದಲ್ಲಿ ನಾನೂ ಒಂದು ಜಿಲ್ಲೆಯಲ್ಲಿ ಪಾಲ್ಗೊಳ್ಳುತ್ತೇನೆ. ಯಾವ ಜಿಲ್ಲೆ ಎಂಬುದನ್ನು ಶೀಘ್ರ ನಿರ್ಧರಿಸಲಾಗುವುದು.

* ಏಪ್ರಿಲ್ 15 ರಿಂದ ಮೇ 29 ರವರೆಗೆ ಜನಗಣತಿ ಕಾರ್ಯ ರಾಜ್ಯದಲ್ಲಿ ನಡೆಯಲಿದೆ. ಮೊಬೈಲ್ ಆ್ಯಪ್ ಮೂಲಕ  ದೇಶದಲ್ಲಿ ನಡೆಯುತ್ತಿರುವ ಮೊದಲ ಗಣತಿ ಇದಾಗಿದೆ. ಇದು ಸಂಪೂರ್ಣ ಕಾಗದರಹಿತ ಪ್ರಕ್ರಿಯೆಯಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions