Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಿಪಕ್ಷ ನಾಯಕ ಆರ್.ಅಶೋಕ್’ಗೆ ಈ ಸವಾಲ್ ಹಾಕಿದ ‘ಸಚಿವ ರಾಮಲಿಂಗಾರೆಡ್ಡಿ’
KARNATAKA

‘ವಿಪಕ್ಷ ನಾಯಕ ಆರ್.ಅಶೋಕ್’ಗೆ ಈ ಸವಾಲ್ ಹಾಕಿದ ‘ಸಚಿವ ರಾಮಲಿಂಗಾರೆಡ್ಡಿ’

By kannadanewsnow0912/11/2024 2:23 PM

ಬೆಂಗಳೂರು: ಶಕ್ತಿ ಯೋಜನೆಯ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಅಲ್ಲದೇ ಬಹಿರಂಗವಾಗಿಯೇ ಚರ್ಚೆಗೆ ಆಹ್ವಾನಿಸಿ ಈ ಸವಾಲ್ ಹಾಕಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿರೋಧ ಪಕ್ಷದ ನಾಯಕರೇ, ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌ ಎಂದಿದ್ದಾರೆ.

ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ‌. ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ಎಂಬುದಕ್ಕೆ ಶ್ಚೇತಪತ್ರ ಹೊರಡಿಸಿ ತಮ್ಮ ಅವಧಿಯ ಆಡಳಿತವನ್ನು ಜನರಿಗೆ ತೋರಿಸಬೇಕೆಂಬ ತಮ್ಮ ಮಹದಾಸೆಗೆ ನಾವು ಅಭಾರಿ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ‌ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ. ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ ಎಂದು ತಿಳಿಸಿದ್ದಾರೆ.

ನಾವು ಈಗಾಗಲೇ ಹಲವು ಬಾರಿ ತಿಳಿಸಿದ್ದೇನೆ, ಆದಾಯವೇ ಬೇರೆ ಲಾಭವೇ ಬೇರೆ. ಆದಾಯದಲ್ಲಿ ಗಣನೀಯ ಹೆಚ್ಚಳವಾಗಿದ್ದರೂ ಸಹ ಲಾಭವನ್ನು ಗಳಿಸಲು ಸಾಧ್ಯವಿಲ್ಲ, ಏಕೆಂದರೆ ತಮ್ಮ ಪಕ್ಷದವರು ಬಾಕಿ ಇಟ್ಟು ಹೋಗಿರುವ ರೂ.5900 ಕೋಟಿ ನಷ್ಟ ಸಾರಿಗೆ ಸಚಿವರಾಗಿ, ಹಲವು ಬಾರಿ ಅನೇಕ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರೂ, ಈ ಬಗ್ಗೆ ತಮಗೆ ಅರ್ಥವಾಗದಿದ್ದರೆ ನಾನು ಏನು ಮಾಡಲು ಸಾಧ್ಯ. ಈ ಬಗ್ಗೆ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ನಂತರ ಟ್ಟೀಟ್ ಮಾಡಿದರೆ‌ ಒಳಿತು ಎಂದಿದ್ದಾರೆ.

ತಮ್ಮ ಬಿ.ಜೆ.ಪಿ ಪಕ್ಷದ ಆಡಳಿತದ ಐದು ವರ್ಷಗಳಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮಾನ್ಯ ಮುಖ್ಯಮಂತ್ರಿಗಳಾಗಿದ್ದಾಗ, ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿ.ಎಂ.ಟಿ ಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ 6200 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3450 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ. ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ ಎಂದಿದ್ದಾರೆ.

“ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ , ಅರ್ಧವೇತನ ,ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಕಾರ್ಮಿಕ‌ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಳೆದ ಏಳೆಂಟು ವರ್ಷಗಳಿಂದ ಬಾಕಿ ಉಳಿದಿದ್ದ 1000 ಕ್ಕೂ ಅಧಿಕ ಮೃತ ಅವಲಂಬಿತ‌ ಕುಟುಂಬಗಳಿಗೆ ಅನುಕಂಪ ಆಧಾರದಲ್ಲಿ ಹುದ್ದೆ ನೀಡಲಾಗಿದೆ. ಕಳೆದ‌ 5 ವರ್ಷದಲ್ಲಿ ತಮ್ಮ ಸರ್ಕಾರ ಸಂಪೂರ್ಣ ನಿಲ್ಲಿಸಿದ್ದ ಪ್ರಕ್ರಿಯೆ ಇದು ಎಂದು ಗುಡುಗಿದ್ದಾರೆ.

ತಮ್ಮ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕರೇ,

ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ.

ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌.

ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು… https://t.co/evlPthYTT8

— Ramalinga Reddy (@RLR_BTM) November 12, 2024

ಖ್ಯಾತ ಬಂಗಾಳಿ ನಟ ಮನೋಜ್ ಮಿತ್ರಾ ನಿಧನ | Bengali actor Manoj Mitra passes away

BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ

Share. Facebook Twitter LinkedIn WhatsApp Email

Related Posts

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM2 Mins Read

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM1 Min Read

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM2 Mins Read
Recent News

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM

ಎಚ್ಡಿಎಫ್ಸಿ ಬ್ಯಾಂಕ್ ಸಿಇಒ ವಿರುದ್ಧ ವಂಚನೆ: ಲೀಲಾವತಿ ಟ್ರಸ್ಟ್ ಆರೋಪ

08/06/2025 11:06 AM
State News
KARNATAKA

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

By kannadanewsnow5708/06/2025 11:20 AM KARNATAKA 2 Mins Read

ಭಾರತದಲ್ಲಿ ಹಲವು ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತವೆ. ಈ ಕ್ರಮದಲ್ಲಿ, ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡ್ ಬಗ್ಗೆ ಒಂದು ಪ್ರಮುಖ…

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

08/06/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.