Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೀಜಿಂಗ್‌ನಲ್ಲಿ ‘ಮಹಾಬಲ’ರ ಸಮಾಗಮ: ಇರಾನ್ ಯುದ್ಧ ಮತ್ತು ವ್ಯಾಪಾರ ಸಂಬಂಧಗಳ ಕುರಿತು ಟ್ರಂಪ್-ಕ್ಸಿ ಜಿನ್‌ಪಿಂಗ್ ಮಾತುಕತೆ!

BIG NEWS: ದೇವಸ್ಥಾನಕ್ಕೆ ಹೋಗುವುದು ಹಿಂದೂ ಧರ್ಮದ ಕಡ್ಡಾಯ ನಿಯಮವಲ್ಲ: ಸುಪ್ರೀಂ ಕೋರ್ಟ್

ಬಂಗಾರದ ಬೆಲೆಯಲ್ಲಿ ದಾಖಲೆಯ ಜಿಗಿತ: ₹1.62 ಲಕ್ಷ ದಾಟಿದ 10 ಗ್ರಾಂ ಚಿನ್ನದ ಬೆಲೆ; ಬೆಳ್ಳಿ ದರ 6% ಏರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಿರುಪತಿಗೆ ತೆರಳೋ ಕರ್ನಾಟಕದ ಭಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್
KARNATAKA

ತಿರುಪತಿಗೆ ತೆರಳೋ ಕರ್ನಾಟಕದ ಭಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದಿಂದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುವಂತ ಭಕ್ತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್‌ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

* ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ದಿನಾಂಕ:20.01.2025 ರಂದು  ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

* ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+GST) ನಿಗಧಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.

* ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು*ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.

* ತಿರುಪತಿ ಹಾಗೂ ತಿರೂಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

* ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.

*ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳ ಹಾಗೂ ಆಂಧ್ರ ಪ್ರದೇಶದ ಮಾನ್ಯ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.

*ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ ಸೈಟ್ https://karnatakatemplesaccommodation.com/ ಮೂಲಕ ಶೇ.60% ರಷ್ಟು Online ಮೂಲಕ ಹಾಗೂ ಶೇ.40% Offline ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

6 Mins Read

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

1 Min Read

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

2 Mins Read
Recent News

​ಬೀಜಿಂಗ್‌ನಲ್ಲಿ ‘ಮಹಾಬಲ’ರ ಸಮಾಗಮ: ಇರಾನ್ ಯುದ್ಧ ಮತ್ತು ವ್ಯಾಪಾರ ಸಂಬಂಧಗಳ ಕುರಿತು ಟ್ರಂಪ್-ಕ್ಸಿ ಜಿನ್‌ಪಿಂಗ್ ಮಾತುಕತೆ!

BIG NEWS: ದೇವಸ್ಥಾನಕ್ಕೆ ಹೋಗುವುದು ಹಿಂದೂ ಧರ್ಮದ ಕಡ್ಡಾಯ ನಿಯಮವಲ್ಲ: ಸುಪ್ರೀಂ ಕೋರ್ಟ್

ಬಂಗಾರದ ಬೆಲೆಯಲ್ಲಿ ದಾಖಲೆಯ ಜಿಗಿತ: ₹1.62 ಲಕ್ಷ ದಾಟಿದ 10 ಗ್ರಾಂ ಚಿನ್ನದ ಬೆಲೆ; ಬೆಳ್ಳಿ ದರ 6% ಏರಿಕೆ!

ಐಪಿಎಲ್‌ನಲ್ಲಿ ಬಿಸಿಸಿಐ ಶಿಸ್ತುಕ್ರಮದ ಚಾಟಿ: ಆಟಗಾರರು ಮತ್ತು ಮಾಲೀಕರಿಗೆ ಹೊಸ ‘ಡೆಡ್‌ಲೈನ್’ ನಿಯಮಗಳು!

State News
KARNATAKA

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 6 Mins Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಮಹತ್ವದ ಬದಲಾವಣೆ ಮಾಡಲಾಗಿದ್ದು, ಒಟ್ಟು 87 ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ಅಧಿಕಾರಿಗಳನ್ನು…

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

ಪ್ರಧಾನಿ ಮೋದಿ ಕರೆಗೆ ಆರ್.ಅಶೋಕ್ ಸ್ಪಂದನೆ: ಪೆಟ್ರೋಲ್ ಬಳಕೆ ಇಳಿಕೆ, ಬೆಂಗಾವಲು ವಾಹನಕ್ಕೂ ಬ್ರೇಕ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.