ಬೆಂಗಳೂರು: ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸುಳಿವು ನೀಡಿದ್ದಾರೆ.
ಅವರು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.