ಬೆಂಗಳೂರು: ಬಿಎಂಟಿಸಿಯಿಂದ 2,286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಆಯ್ಕೆಯಾಗಿರುವಂತ ನೂತನ ಅಭ್ಯರ್ಥಿಗಳಿಗೆ ಮೇ.12ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ಪತ್ರವನ್ನು ವಿತರಣೆ ಮಾಡಲಿದ್ದಾರೆ.
ಬಿ.ಎಂ.ಟಿ.ಸಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆದ ನೇಮಕಾತಿ ಪ್ರಕ್ರಿಯೆ ಆಗಿದ್ದು,ಯಾವುದೇ ರೀತಿಯ ಅವ್ಯವಹಾರವಿಲ್ಲದೆ ದೂರುಗಳಿಗೆ ಅಸ್ಪದ ಕೊಡದೆ KEA ಮುಖಾಂತರ ಪರೀಕ್ಷೆ ನಡೆಸಿ, ಆಯ್ಕೆಯಾದ 2,286 ನಿರ್ವಾಹಕರ ಹುದ್ದೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳ ವಿತರಣೆ ಮಾಡುವುದಾಗಿ ತಿಳಿದು ಬಂದಿದೆ.
2018 ರಿಂದ ಸ್ಥಗಿತಗೊಂಡಿದ್ದ ನೇಮಕಾತಿಗೆ ಮರುಚಾಲನೆ ನೀಡಿ ತ್ವರಿತವಾಗಿ ಪೂರ್ಣಗೊಳಿಸಲಾಗಿದೆ. ಮೇ.12ರಂದು ಬೆಳಗ್ಗೆಯಿಂದ ಬೆಂಗಳೂರಿನ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಿದ್ದಾರೆ.
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ
BREAKING: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ: IPL ಪಂದ್ಯಾವಳಿ ಒಂದು ವಾರ ಮುಂದೂಡಿಕೆ | IPL Match 2025