ಅಬುಧಾಬಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(S Jaishankar) ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ” ಎಂದು ಬಣ್ಣಿಸಿದ್ದಾರೆ.
ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಎಸ್ ಜೈಶಂಕರ್ ಅವರು ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಈ ಮಾತಗಳನ್ನಾಡಿದ್ದಾರೆ. ಅಷ್ಟೇ ಅಲ್ಲದೇ, ಇಲ್ಲಿನ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, “ಗಣೇಶ ಚತುರ್ಥಿಯಂದು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಕ್ಷಿಪ್ರ ಪ್ರಗತಿಯನ್ನು ನೋಡಿ ನನಗೆ ಸಂತೋಷವಾಗಿದೆ. ಎಲ್ಲರಿಗೂ ನನ್ನ ಧನ್ಯವಾದ” ಎಂದು ತಿಳಿಸಿದ್ದಾರೆ.
गणेश चतुर्थी के शुभ अवसर पर अबू धाबी में निर्माणाधीन @BAPS हिंदू मंदिर में दर्शन करने का सौभाग्य प्राप्त हुआ।
मंदिर निर्माण की तीव्र प्रगति तथा इसमें शामिल सभी लोगों की सराहना करता हूँ।साइट पर @BAPS टीम, समुदाय के सदस्यों, श्रद्धालुओं और कार्यकर्ताओं से मिलकर अति प्रसन्नता हुई। https://t.co/G02vd4jdDo
— Dr. S. Jaishankar (@DrSJaishankar) August 31, 2022
ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ: ʻಗಣೇಶ ಮೂರ್ತಿʼಗೆ ಆರತಿ ಬೆಳಗಿದ ನಮೋ… Watch Video