Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಗರಸಭೆ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದ ಮಾಜಿ ಸಚಿವ ಸುಜಿತ್ ಬೋಸ್ ED ವಶಕ್ಕೆ |municipality recruitment scam

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳ ವಿವಾಹ ಪ್ರೋತ್ಸಾಹಧನ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕಟ್ಟಡ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್
KARNATAKA

ಮಕ್ಕಳ ವಿವಾಹ ಪ್ರೋತ್ಸಾಹಧನ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕಟ್ಟಡ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಧಾರವಾಡ : ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ 2024-25ನೇ ಸಾಲಿನಲ್ಲಿ ಮಂಜೂರಾಗಿರುವ 23,121 ಫಲಾನುಭವಿಗಳ ಪೈಕಿ 6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಅವರ ಖಾತೆಗೆ ಡಿಬಿಟಿ ಮೂಲಕ ನೇರ ಜಮಾ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು.

ಅವರು ಇಂದು (ಮಾ.5) ಬೆಳಿಗ್ಗೆ ವಿಧಾನ ಸಭೆಯ ಕಲಾಪದಲ್ಲಿ ಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು ಮಂಜೂರಾಗಿವೆ. ಒಟ್ಟಾರೆಯಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು ರಾಜ್ಯಾಂದತ್ಯ 1,57,174 ಅರ್ಜಿಗಳು ಮದುವೆ ಧನ ಸಹಾಯ ಬಯಸಿ, ಸಲ್ಲಿಕೆಯಾಗಿದ್ದು ಇವುಗಳ ಪೈಕಿ 1,06,091 ಅರ್ಜಿಗಳು ಮಂಜೂರಾಗಿವೆ. ಮತ್ತು ಇದರಲ್ಲಿನ 6,317 ಅರ್ಜಿಗಳು ಪರಿಶೀಲನೆಗೆ ಹಾಗೂ ಮಂಜೂರಾತಿಗೆ ಬಾಕಿ ಇವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಪಾವತಿಸುವ ಪೂರ್ವದಲ್ಲಿ ಕಾರ್ಮಿಕ ಅಧಿಕಾರಿಗಳು ಡಿಬಿಟಿ ತಂತ್ರಾಂಶದ ಮೂಲಕ ಫಲಾನುಭವಿಗಳ ಆಧಾರ್ ವ್ಯಾಲಿಡೆಷನ್ (Validation) ಹಾಗೂ ಇನ್ನಿತರ ಮಾನದಂಡಗಳ ಪ್ರಕ್ರಿಯೆ ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳಿಗೆ ಮಂಡಳಿಯಿಂದ ಸಹಾಯಧನವನ್ನು ಪಾವತಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2023 ರಿಂದ ಈ ಯೊಜನೆಯಡಿ ಒಟ್ಟು 1,081 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ 652 ಫಲಾನುಭವಿಗಳಿಗೆ ಸಹಾಯ ಧನವನ್ನು ಮಂಜೂರು ಮಾಡಿ, ಡಿಬಿಟಿ ಮುಖಾಂತರ ಫಲಾನುಭವಿಗಳಿಗೆ ಸಹಾಯಧನನ್ನು ವರ್ಗಾಯಿಸಲಾಗಿದೆ ಹಾಗೂ 46 ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ ಎಂದು ಸಚಿವ ಸಂತೋಷ ಲಾಡ್ ಅವರು ಸದನದಲ್ಲಿ ತಿಳಿಸಿದರು.

ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್

ರೈತರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 7 ಗಂಟೆ ‘3 ಫೇಸ್ ವಿದ್ಯುತ್’ ಪೂರೈಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

2 Mins Read

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

2 Mins Read

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳಕ್ಕೆ ಅಸ್ತು? Salary Hike

1 Min Read
Recent News

BREAKING: ನಗರಸಭೆ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದ ಮಾಜಿ ಸಚಿವ ಸುಜಿತ್ ಬೋಸ್ ED ವಶಕ್ಕೆ |municipality recruitment scam

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

ತೈಲ ಅಭಾವವಿಲ್ಲ, ಆದರೆ ದಿನಕ್ಕೆ ₹1,000 ಕೋಟಿ ನಷ್ಟ! ಪೆಟ್ರೋಲ್ ಬೆಲೆ ಸ್ಥಿರವಾಗಿರಲು ಇದೇ ಕಾರಣ: ಕೇಂದ್ರದ ಸ್ಪಷ್ಟನೆ

State News
KARNATAKA

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಮಾಹಿತಿ ಮತ್ತು ದೂರುಗಳ ಸಲ್ಲಿಕೆಗೆ ಅನುಕೂಲವಾಗುವಂತೆ ಕರ್ನಾಟಕದ ಎಲ್ಲಾ 31…

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳಕ್ಕೆ ಅಸ್ತು? Salary Hike

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಖಾತೆಗೆ ಎರಡು ತಿಂಗಳ `ಗೃಹಲಕ್ಷ್ಮಿ’ ಹಣ ಜಮಾ | Grihalakshmi

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.