ಹುಬ್ಬಳ್ಳಿ: ಇಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ 58 ವರ್ಷದ ನಿಜಲಿಂಗಪ್ಪ ಬೇಪುರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹಿನ್ನೆಲೆಯಲ್ಲಿ ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸವಿವರಾದ ಸಂತೋಷ್ ಲಾಡ್ ಅವರು ಕಿಮ್ಸ್ ಅಸ್ಪತ್ರೆಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗಾಯಗೊಂಡ ಎಲ್ಲರಿಗೂ ಹೆಚ್ಚಿನ ಮುತುವರ್ಜಿ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಬೆಂಗಳೂರಿನಿಂದ ತಜ್ಞ ವೈದ್ಯರನ್ನೂ ಸಹ ಕರೆಸಲಾಗಿದೆ. ಇಷ್ಟೆಲ್ಲ ಪ್ರಯತ್ನಗಳ ಮಧ್ಯೆಯೂ ಈ ಸಾವುಗಳು ಸಂಭವಿಸಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸಚಿವರು, ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರವನ್ನು ಘೋಷಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಅಧಿಕಾರಿಗಳು, ಕಿಮ್ಸ್ ಆಸ್ಪತ್ರೆಯ ವೈದ್ಯರುಗಳ ತಂಡ ಹಾಗೂ ಗಾಯಾಳುಗಳ ಕುಟುಂಬಸ್ಥರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವುದು ಎಷ್ಟು ಸರಿ?: ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ
BREAKING:ವಿರಾಟ್ ಕೊಹ್ಲಿಗೆ ಮ್ಯಾಚ್ ಅಮಾನತು ಇಲ್ಲ: ಪಂದ್ಯದ ಶುಲ್ಕದ ಶೇ.20ರಷ್ಟು ದಂಡ