ಹಾವೇರಿ : ಇಂದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹಾವೇರಿಯಲ್ಲಿ ದುರಂತ ಸಂಭವಿಸಿದ್ದು ದೇವರ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿ ಹೊಡೆದ ಪರಿಣಾಮ 13 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟ 13 ಜನ ಕುಟುಂಬಸ್ಥರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ.

ಹೌದು ಇಂದು ನಸುಕಿನ ಜಾವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಭೀಕರವಾಗಿ ಬಂದು ಅಪ್ಪಳಿಸಿದ ಪರಿಣಾಮ ವಾಹನದಲ್ಲಿದ್ದ 17 ಜನರ ಪೈಕಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಪರವಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಿಂದ ಪರಿಹಾರ ವಿತರಣೆ ಮಾಡಲಾಯಿತು. ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಅವರು ಪರಿಹಾರದ ಹಣ ವಿತರಿಸಿದ್ದಾರೆ.

ಅಲ್ಲದೆ ಇತ್ತ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದ್ದು ಸರ್ಕಾರ ಪ್ರತಿಯೊಬ್ಬರಿಗೆ 10 ಲಕ್ಷ ರೂಪಾಯಿ ಪರಿಹಾರದ ಹಣ ನೀಡುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬಸ್ಥರು ಇದೀಗ ಆಗ್ರಹಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಬಗ್ಗೆ ತಿಳಿದು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬ ಸರಿಗೆ ದುಃಖ ಪಡಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Share.
Exit mobile version