ಕೊಪ್ಪಳ: ಕೆ.ಕೆ.ಆರ್.ಡಿ.ಬಿ ಹಾಗೂ ಕೊಪ್ಪಳ ಶಾಸಕರ ಅನುದಾನದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ 21 ಹೊಸ ವಾಹನಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ 2024-25ನೇ ಆರ್ಥಿಕ ವರ್ಷದಲ್ಲಿ ಮಂಜೂರಾಗಿರುವ 200 ಲಕ್ಷ ರೂ. ಅನುದಾನದಲ್ಲಿ ಇಲಾಖೆಯ ದೈನಂದಿನ ಕರ್ತವ್ಯದ ಸಲುವಾಗಿ 16 ಬುಲೆರೋ, 2 ಸ್ಕಾರ್ಪಿಯೋ ಮತ್ತು 1 ಇನ್ನೋವಾ ವಾಹನಗಳನ್ನು ಹಾಗೂ ಕೊಪ್ಪಳ ಶಾಸಕರ ಅನುದಾನದಡಿ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ 2 ಬೋಲೆರೊ ಖರೀದಿಸಲಾಗಿದ್ದು, ಈ ವಾಹನಗಳ ಪೊಲೀಸ್ ಸೇವೆಗೆ ಸಚಿವರು, ಶಾಸಕರು ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಮಹೇಂದ್ರಕುಮಾರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ಪೊಲೀಸ್ ಇಲಾಖೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಖ್ಯಾತ ‘ರಂಗಭೂಮಿ ನಟ ಅಲೋಕ್ ಚಟರ್ಜಿ’ ನಿಧನ | Actor Alok Chatterjee No More
ಇದು 60 ಪರ್ಸೆಂಟ್ ಕಮಿಶನ್ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಆರ್.ಅಶೋಕ