ಕಲಬುರಗಿ : ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತಂತೆ ಸಚಿವ ಶಿವರಾಜ್‌ ತಂಗಡಗಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌, ಸ್ವಾಮೀಜಿಗಳು ತಮ್ಮ ವೈಯಕ್ತಿಕ ವಿಚಾರ ಹೇಳಿದ್ದಾರೆ. ಸ್ವಾಮೀಜಿಗಳ ಹೇಳಿಕೆ ಕುರಿತು ಹೆಚ್ಚಿನ ಚರ್ಚೆ ಮಾಡುವುದು ಬೇಡ. ನಮ್ಮ ಹೈಕಮಾಂಡ್‌ ಬಲಿಷ್ಠವಾಗಿದ್ದು, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್‌ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಕರ್ನಾಟಕ ಕಾಂಗ್ರೆಸ್​ ನಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಒಕ್ಕಲಿಗ ಸ್ವಾಮೀಜಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕೆಂದು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.

Share.
Exit mobile version