Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ವಂ ಇಂಡಸ್ AI ಅಪ್ಲಿಕೇಶನ್ ಬಿಡುಗಡೆ ; ‘ChatGPT’ಗೆ ಸ್ಪರ್ಧಿ.? ಇದೆಷ್ಟು ಭಿನ್ನವಾಗಿದೆ ಗೊತ್ತಾ?

22/02/2026 10:12 PM

BREAKING : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿಗೆ ಭಾರತ ಖಂಡನೆ ; ‘ಕಾಬೂಲ್ ಸಾರ್ವಭೌಮತ್ವ’ಕ್ಕೆ ಬೆಂಬಲ

22/02/2026 9:55 PM

‘SBI’ನಿಂದ 50 ಲಕ್ಷ ರೂ. ಗೃಹ ಸಾಲ ಪಡೆದ್ರೆ ಎಷ್ಟು ‘EMI’ ಪಾವತಿಸ್ಬೇಕು ಗೊತ್ತಾ.? ಸಂಪೂರ್ಣ ಪಟ್ಟಿ ಇಲ್ಲಿದೆ!

22/02/2026 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು  ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ
KARNATAKA

ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು  ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

By kannadanewsnow0912/12/2025 8:16 PM

ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು” ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿರುವ ಕಾರಣ ಅಪೂರ್ಣಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.

ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ ರೂ.5000, ಎರಡನೇ ಅಪರಾಧಕ್ಕಾಗಿ ರೂ. 10,000 ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20,000 ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM1 Min Read

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM2 Mins Read

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM1 Min Read
Recent News

ಸರ್ವಂ ಇಂಡಸ್ AI ಅಪ್ಲಿಕೇಶನ್ ಬಿಡುಗಡೆ ; ‘ChatGPT’ಗೆ ಸ್ಪರ್ಧಿ.? ಇದೆಷ್ಟು ಭಿನ್ನವಾಗಿದೆ ಗೊತ್ತಾ?

22/02/2026 10:12 PM

BREAKING : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿಗೆ ಭಾರತ ಖಂಡನೆ ; ‘ಕಾಬೂಲ್ ಸಾರ್ವಭೌಮತ್ವ’ಕ್ಕೆ ಬೆಂಬಲ

22/02/2026 9:55 PM

‘SBI’ನಿಂದ 50 ಲಕ್ಷ ರೂ. ಗೃಹ ಸಾಲ ಪಡೆದ್ರೆ ಎಷ್ಟು ‘EMI’ ಪಾವತಿಸ್ಬೇಕು ಗೊತ್ತಾ.? ಸಂಪೂರ್ಣ ಪಟ್ಟಿ ಇಲ್ಲಿದೆ!

22/02/2026 8:57 PM

ಎಚ್ಚರ, ಹುಳಿ ಹುಳಿಯಾದ ಸಿಹಿ ‘ದ್ರಾಕ್ಷಿ’ ನಿಮ್ಮ ಜೀವ ತೆಗೆಯ್ಬೋದು.! ವಿಜ್ಞಾನಿಗಳಿಂದ ಎಚ್ಚರಿಕೆ

22/02/2026 8:28 PM
State News
KARNATAKA

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

By kannadanewsnow0922/02/2026 7:31 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ…

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM

ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಸಿಡಿದೆದ್ದ ‘ಸಾಗರದ ಆವಿನಹಳ್ಳಿ’ ಗ್ರಾಮಸ್ಥರು: ಫೆ.24ರಂದು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

22/02/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.