ಮಂಗಳೂರು: ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಸಚಿವೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದರು. ಅಲ್ಲದೆ ಒಂದು ತಿಂಗಳ ಸಂಬಳ ನೀಡುವುದಾಗಿ ಘೋಷಣೆ ಮಾಡಿದರು. ಇನ್ನು ಹಲವಾರು ಕಾರ್ಯಕರ್ತರ ಚೆಕ್ ವಿತರಣೆಯನ್ನು ಮಾಡಿದ್ರು.