ಬೀದರ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರದಲ್ಲಿ ಸ್ಯಾಂಟ್ರೋ ರವಿ ಮೀಲಕ ಡೀಲ್ ಮಾಡೋ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಹೆಚ್ ಡಿಕೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಟಾಂಗ್ ನೀಡಿರುವಂತ ಕುಮಾರಸ್ವಾಮಿ, ಸೋಮಶೇಖರ್ ಜೊತೆಗೆ ಸ್ಯಾಂಟ್ರೋ ರವಿ ಇರುವಂತ ವೀಡಿಯೋ ರಿಲೀಸ್ ಮಾಡಿದ್ದಾರೆ.
ಇಂದು ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಚಾಂಗಲೇರಾದಲ್ಲಿ ತಮ್ಮ ಮೊಬೈಲ್ ನಲ್ಲಿಯೇ ಸ್ಯಾಂಟ್ರೋ ರವಿ ಜೊತೆಗೆ ಸಚಿವ ಸೋಮಶೇಖರ್ ಇರೋ ವೀಡಿಯೋ ತೋರಿಸಿದರು. ಈ ವೀಡಿಯೋ ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿರುವಂತ ವೀಡಿಯೋ ಆಗಿದೆ ಎನ್ನಲಾಗಿದೆ.
ಇದೇ ವೇಳೆ ಸೋಮಶೇಖರ್ ವಿರುದ್ಧ ವಾಗ್ಧಾಳಿ ನಡೆಸಿದಂತ ಅವರು, ಕಳ್ಳನ ಮನಸ್ಸು ಹುಳ್ಳುಳ್ಳಗೆ ಅಂದರೇ ಇವರಿಗ್ಯಾಕೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಶೀಘ್ರವೇ ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನು ಸ್ವರೂಪ – ಸಿಎಂ ಬೊಮ್ಮಾಯಿ ಘೋಷಣೆ