ಬೆಂಗಳೂರು: ಸರ್ಕಾರದ ಲಂಚದ ಬಾಕ್ಸ್ ಬೇಡ, ನಮ್ಮ ಲಂಚ್ ಬಾಕ್ಸ್ ಅಷ್ಟೇ ಸಾಕು ಎನ್ನುವ ಪ್ರಾಮಾಣಿಕ ಪತ್ರಕರ್ತರಿಂದ ಸರ್ಕಾರದ ಮಹಾ ಅಕ್ರಮ ಹೊರಬಿದ್ದಿದೆ. ‘ಸುಧಾಕರ್ ( Minister Dr K Sudhakar ) ಅವರೇ, ಸ್ಕಾಚ್, ವಾಚ್, ಗೋಲ್ಡ್ ಕಾಯಿನ್ ( Gold Coin ) ಅಲ್ಲದೆ ಇನ್ನೂ ಏನೇನಿದೆ ಈ ಬಾಕ್ಸ್ನಲ್ಲಿ? ಎಲ್ಲವನ್ನೂ ಹಣದಿಂದ ಖರೀದಿಸುತ್ತೇವೆ ಎಂಬ ಧಿಮಾಕು ಬಿಜೆಪಿಗೆ ಬಂದಿರುವುದು ಭ್ರಷ್ಟಾಚಾರದಿಂದ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ಸರ್ಕಾರದ ಲಂಚದ ಬಾಕ್ಸ್ ಬೇಡ, ನಮ್ಮ ಲಂಚ್ ಬಾಕ್ಸ್ ಅಷ್ಟೇ ಸಾಕು ಎನ್ನುವ ಪ್ರಾಮಾಣಿಕ ಪತ್ರಕರ್ತರಿಂದ ಸರ್ಕಾರದ ಮಹಾ ಅಕ್ರಮ ಹೊರಬಿದ್ದಿದೆ.
'@mla_sudhakar ಅವರೇ, ಸ್ಕಾಚ್, ವಾಚ್, ಗೋಲ್ಡ್ ಕಾಯಿನ್ ಅಲ್ಲದೆ ಇನ್ನೂ ಏನೇನಿದೆ ಈ ಬಾಕ್ಸ್ನಲ್ಲಿ?
ಎಲ್ಲವನ್ನೂ ಹಣದಿಂದ ಖರೀದಿಸುತ್ತೇವೆ ಎಂಬ ಧಿಮಾಕು ಬಿಜೆಪಿಗೆ ಬಂದಿರುವುದು ಭ್ರಷ್ಟಾಚಾರದಿಂದ. pic.twitter.com/97DM3Id8bI
— Karnataka Congress (@INCKarnataka) October 29, 2022
ಈ ಕುರಿತಂತೆ ಸರಣಿ ಟ್ವಿಟ್ ( Twitter ) ಮಾಡಿದ್ದು, ಸಚಿವ ಸುಧಾಕರ್ ಅವರ ಕಡೆಯಿಂದಲೂ ಪತ್ರಕರ್ತರಿಗೆ ದುಬಾರಿ ಬೆಲೆ ಲಂಚ ರೂಪದ ಉಡುಗೊರೆ ನೀಡಿರುವ ಸಂಗತಿ ಹೊರಬಂದಿದೆ. ಸುಧಾಕರ್ ಅವರೇ, ಏಕೆ ಈ ಬಗ್ಗೆ ತಾವು ತುಟಿ ಬಿಚ್ಚುತ್ತಿಲ್ಲ? ಅಕ್ರಮ ಮುಚ್ಚಿಕೊಳ್ಳಲು ಸರ್ಕಾರ ಯಾವ ಹಂತಕ್ಕೆ ಬೇಕಿದ್ದರೂ ಇಳಿಯಬಹುದು ಎನ್ನಲು ಪತ್ರಕರ್ತರಿಗೆ ಲಂಚ ನೀಡಿದ ಈ ಪ್ರಕರಣವೇ ನಿದರ್ಶನ ಎಂದು ವಾಗ್ಧಾಳಿ ನಡೆಸಿದೆ.
ಸಚಿವ ಸುಧಾಕರ್ ಅವರ ಕಡೆಯಿಂದಲೂ ಪತ್ರಕರ್ತರಿಗೆ ದುಬಾರಿ ಬೆಲೆ ಲಂಚ ರೂಪದ ಉಡುಗೊರೆ ನೀಡಿರುವ ಸಂಗತಿ ಹೊರಬಂದಿದೆ.@mla_sudhakar ಅವರೇ, ಏಕೆ ಈ ಬಗ್ಗೆ ತಾವು ತುಟಿ ಬಿಚ್ಚುತ್ತಿಲ್ಲ?
ಅಕ್ರಮ ಮುಚ್ಚಿಕೊಳ್ಳಲು ಸರ್ಕಾರ ಯಾವ ಹಂತಕ್ಕೆ ಬೇಕಿದ್ದರೂ ಇಳಿಯಬಹುದು ಎನ್ನಲು ಪತ್ರಕರ್ತರಿಗೆ ಲಂಚ ನೀಡಿದ ಈ ಪ್ರಕರಣವೇ ನಿದರ್ಶನ.#40PercentSarkara pic.twitter.com/K6skayqZIR
— Karnataka Congress (@INCKarnataka) October 29, 2022
ಪಿಎಸ್ಐ ಅಕ್ರಮ ನಡೆದಾಗ, ಬೋರ್ ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ನೇಮಕಾತಿ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗ, ಕಾಂಗ್ರೆಸ್ನದ್ದು ಗಾಳಿಯಲ್ಲಿ ಗುಂಡು ಎಂದಿತ್ತು ಬಿಜೆಪಿ, ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ, ಇದೂ ಬಯಲಾಗಲಿದೆ. ಗುಂಡು ಗಾಳಿಯನ್ನೇ ಸೀಳಿಕೊಂಡು ಮುನ್ನುಗ್ಗುತ್ತದೆ ನೆನಪಿರಲಿ ಎಂದು ಹೇಳಿದೆ.
ಪಿಎಸ್ಐ ಅಕ್ರಮ ನಡೆದಾಗ,
ಬೋರ್ ವೆಲ್ ಅಕ್ರಮ ನಡೆದಾಗ,
ಕೆಪಿಟಿಸಿಎಲ್ ನೇಮಕಾತಿ ಅಕ್ರಮ ನಡೆದಾಗ,
ಗಂಗಾ ಕಲ್ಯಾಣ ಹಗರಣ ನಡೆದಾಗ,ಕಾಂಗ್ರೆಸ್ನದ್ದು ಗಾಳಿಯಲ್ಲಿ ಗುಂಡು ಎಂದಿತ್ತು @BJP4Karnataka,
ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ, ಇದೂ ಬಯಲಾಗಲಿದೆ.
ಗುಂಡು ಗಾಳಿಯನ್ನೇ ಸೀಳಿಕೊಂಡು ಮುನ್ನುಗ್ಗುತ್ತದೆ ನೆನಪಿರಲಿ. https://t.co/ZAIrKTo6uv— Karnataka Congress (@INCKarnataka) October 29, 2022