ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರೈತರು ಬೆಳೆದ ಬೆಳೆಯಲ್ಲ ನಾಶವಾಗಿದೆ. ಹೀಗಾಗಿ ಇಂದು ಮಳೆಹಾನಿ ಪ್ರದೇಶಕ್ಕೆ ಸಚಿವ ಡಾ.ಕೆ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS: ಮುರುಘಾಶ್ರೀ ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ನಂತರ ಮಾತನಾಡಿದ ಅವರು, ರೈತರ ಅಹವಾಲು ಆಲಿಸಿದ್ದಾರೆ. ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಆ ವರದಿ ಬಂದ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಕೆರೆಗಳೆಲ್ಲ ಜಲಾವೃತಗೊಂಡು ಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.