ಸುಭಾಷಿತ :

Tuesday, February 18 , 2020 1:53 PM

ರಾಜ್ಯದ ವಿದ್ಯಾರ್ಥಿಗಳು, ಪೋಷಕರಿಗೆ ನೆಮ್ಮದಿಯ ಸುದ್ದಿ : RTE ಪದ್ದತಿ ಮುಂದುವರಿಕೆ – ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ


Saturday, January 25th, 2020 3:33 pm

ಬೆಂಗಳೂರು : ಕಳೆದ ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದಂತ ಆರ್ ಟಿ ಇ ಪದ್ದತಿಯನ್ನು ಈಗಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರದ್ದು ಮಾಡುತ್ತಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಆರ್ ಟಿ ಇ ಪದ್ದತಿಯನ್ನು ಯಾವದೇ ಕಾರಣಕ್ಕೂ ರದ್ದು ಮಾಡುವುದಿಲ್ಲ. ಅದು ಹಾಗೆಯೇ ಮುಂದುವರೆಯಲಿದೆ ಎಂಬುದಾಗಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ, ಪೋಷಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಸರಕಾರ ಜಾರಿಗೆ ತಂದಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಸರ್ವಸಮಾನತೆ, ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡುವುದರ ಮೂಲಕ ಉತ್ತಮ ಕಲಿಕಾ ಶಾಲಾ ವಾತಾವರಣವನ್ನು ಮೂಡಿಸುವ ಪ್ರಯತ್ನವಾಗಿತ್ತು. ಇಂತಹ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ(ಆರ್ ಟಿ ಇ) ಪದ್ದತಿಯನ್ನು ರದ್ದು ಪಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಈ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿತ್ತು.

ಈ ಕುರಿತಂತೆ ನಗರದಲ್ಲಿ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್ ಟಿ ಇ) ರದ್ದು ಪಡಿಸಲಾಗುತ್ತಿಲ್ಲ. ಹಾಗೆಯೇ ಮುಂದುವರೆಯಲಿದೆ. ಇದರೊಂದಿಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕೇರಳ ಮಾದರಿಯಲ್ಲಿಯೇ ವಾಟರ್ ಬೆಲ್ ಪದ್ದತಿಯನ್ನು ಜಾರಿಗೆ ತರಲಾಗುತ್ತಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿ, ಪೋಷಕರ ಆತಂಕವನ್ನು ದೂರ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions