ಸುಭಾಷಿತ :

Wednesday, January 29 , 2020 9:37 PM

ದ್ವಿತೀಯ ಪಿಯು ಪರೀಕ್ಷೆ, ಪೂರ್ವಸಿದ್ದತೆ ಬಗ್ಗೆ ಕ್ರಮಕೈಗೊಳ್ಳಿ : ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ


Thursday, January 16th, 2020 8:14 pm

ಬೆಂಗಳೂರು : ಪ್ರಸಕ್ತ ವರ್ಷದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಅದಕ್ಕೆ ಕೂಡಲೇ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪರೀಕ್ಷಾ ಪ್ರಕ್ರಿಯೆ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ  ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರೊಂದಿಗೆ ದ್ವಿತೀಯ ಪಿಯು ಪರೀಕ್ಷೆಯ ವ್ಯವಸ್ಥಿತ ನಿರ್ವಹಣೆ ಕುರಿತಂತೆ ಸಚಿವ ಸುರೇಶ್ ಕುಮಾರ್ ಇಂದು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ರಸಕ್ತ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 2,46,772 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು,  ಫೆಬ್ರುವರಿಯಲ್ಲಿ ಜಿಲ್ಲಾಧಿಕಾರಿಗಳು, ಖಜಾನಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳ ಸಭೆ ಆಯೋಜಿಸಿ ಅತ್ಯಂತ ಸುಸಜ್ಜಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

2020ರ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಜ.25 ರಿಂದ ಫೆ.10ರ ವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಬೇಕು ಎಂದರು. ..

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions