ಬೆಂಗಳೂರು: 2012ರಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಸಚಿವ ಸೋಮಣ್ಮ ವಿರುದ್ಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.
BIGG NEWS : ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್ : ಚಾಲಕ, ಪ್ರಯಾಣಿಕರಿಗೆ ಗಾಯ
ಸಚಿವ ವಿ ಸೋಮಣ್ಣ ವಿರುದ್ಧ 2012ರಲ್ಲಿ ಬೆಂಗಳೂರಿನ ರಾಮಕೃಷ್ಣ ಎಂಬುವರು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ, ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಹೈಕೋರ್ಟ್ ಮೆಟ್ಟಿಲೇಸಿದ್ದಂತ ಸಂದರ್ಭದಲ್ಲಿ, ಮರು ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ಈ ಹಿನ್ನಲೆಯಲ್ಲಿ ಮರು ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರಂಭಿಸಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುಂದಿನ ಎರಡು ತಿಂಗಳಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದೆ. ಹೀಗಾಗಿ ಸಚಿವ ವಿ. ಸೋಮಣ್ಣಗೆ ಸಂಕಷ್ಟ ಎದುರಾಗಿದೆ.
BIGG NEWS : ಹಾವೇರಿಯಲ್ಲಿ `RSS’ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ : 10 ಮಂದಿ ಆರೋಪಿಗಳ ಬಂಧನ