ಚಾಮರಾಜನಗರ: ಜಿಲ್ಲೆಯ ಸಮಸ್ಯೆ ಹೇಳೋಕ್ಕೆ ಬಂದಿದ್ದ ಮಹಿಳೆ ಮೇಲೆ ಸಚಿವ ವಿ.ಸೋಮಣ್ಣ ಕೈ ಮಾಡಿದ್ದಾರೆ. ಸಮಸ್ಯೆ ಹೇಳು ಮುಂದಾಗಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ.
BIGG BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ `ಆನಂದ ಮಾಮನಿ’ ಇನ್ನಿಲ್ಲ| Ananda Mamani no more
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ನಡೆದಿದೆ. ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಹೀಗಾಗಿ ಇದರಿಂದ ಬೇಸತ್ತ ಮಹಿಳೆ ತನ್ನ ಸಮಸ್ಯೆ ಹೇಳಿಕೊಳ್ಳಲು ರ್ವರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು.