ಬೆಂಗಳೂರು: ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಮತ್ತು ನಟ ಸೃಜನ್ ಲೋಕೇಶ್ ಟೀಂ ಗಲಾಟೆ ನಡೆದಿದೆ. ಬೆಂಗಳೂರಿನ ಕ್ಲಬ್ ವೊಂದರಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ತಡವಾಗಿ ಬೆಳಕಿಗೆ ಬಂದಿದೆ.
BIG NEWS : ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿ, ಶಾಲೆಗಳಿಗೆ ರಜೆ ಘೋಷಣೆ
ನಗರದ ಮುದ್ದಿನಪಾಳ್ಯ ಕಿಂಗ್ಸ್ ಕ್ಲಬ್ ನಲ್ಲಿ ಗಲಾಟೆ ನಡೆದಿದೆ. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ಪು ಕಪ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಪ್ರಾಕ್ಟೀಸ್ ಮಾಡುತ್ತಿದ್ದರು. ಪ್ರತಿನಿತ್ಯ ಸೃಜನ್ ಲೋಕೇಶ್ ಟೀಮ್ ಪ್ರಾಕ್ಟೀಸ್ ಮಾಡುತ್ತಿದ್ದರು. ಪಾರ್ಟಿ ವೇಳೆ ಸೃಜನ್ ಟೀಮ್ ಕಿರುಚಾಡುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಸಚಿವ ವಿ ಸೋಮಣ್ಣ ಪುತ್ರ ಅರುಣ್ ಸೃಜನ್ ಟೀಂಗೆ ಯಾಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಿಷ್ಟಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ಆಗಿದ್ದು ಕೈ ಕೈ ಮೀಲಾಯಿಸುವ ಹಂತಕ್ಕೆ ತಲುಪಿತ್ತು. ಆದರೆ ಈ ಗಲಾಟೆ ವೇಳೆ ನಟ ಸೃಜನ್ ಲೋಕೇಶ್ ಕಿಂಗ್ಸ್ ಕ್ಲಬ್ ನಲ್ಲಿ ಇರಲಿಲ್ಲ. ಈ ಘಟನೆ ಬಗ್ಗೆ ಗುಂಪುಗಳು ಮತ್ತು ಕ್ಲಬ್ ಆಡಳಿತ ಮಂಡಳಿ ದೂರು ನೀಡಿಲ್ಲ. ಈ ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.