ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಗಲಾಟೆಯಾಗಿತ್ತು. ಈ ಗಲಾಟೆಯ ವೇಳೆಯಲ್ಲಿ ಗುಂಡಿನ ದಾಳಿ ನಡೆದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದರು. ಇಂತಹ ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ಸಚಿವ ಜಮೀರ್ ಅಹ್ಮದ್ ನೀಡಿದ್ದಾರೆ.
ಇಂದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಜಮೀರ್ ಅಹ್ಮದ್ ಖಾನ್, ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಇದೇ ಸಂದರ್ಭದಲ್ಲಿ ರಾಜಶೇಖರ್ ಅವರ ಕುಟುಂಬಕ್ಕೆ ತಾವು ವೈಯಕ್ತಿಕವಾಗಿ 25 ಲಕ್ಷ ಪರಿಹಾರವನ್ನು ನೀಡಿ, ರಾಜಶೇಖರ್ ಪತ್ನಿ ತುಳಸಿಗೆ ಆರ್ಥಿಕ ನೆರವಿನ ಹಣವನ್ನು ನೀಡಿದರು.
ಈ ವೇಳೆ ಮಾತನಾಡಿದಂತ ಸಚಿವ ಜಮೀರ್ ಅಹ್ಮದ್ ಖಾನ್, ರಾಜಶೇಖರ್ ಅವರು ಇಡೀ ಮನೆಗೆ ಆಧಾರ ಸ್ಥಂಭವಾಗಿದ್ದರು. ಇದೀಗ ಅವರನ್ನು ಕಳೆದುಕೊಂಡು ಕುಟುಂಬ ಸಂಕಷ್ಟದಲ್ಲಿದೆ. ಅವರಿಗೆ ನಾನು ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿದ್ದೇನೆ. ಮುಂದೆಯೂ ನೀಡುವುದಾಗಿ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೂ ರಾಜಿ ಇಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪಷ್ಟನೆ








