ಬೆಂಗಳೂರು : ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಹಾಗೂ ಹೆಚ್ಚುವರಿ ಅಡ್ವೋಕೇಟ್ ಜನರಲ್ ಇಸ್ಮಾಯಿಲ್ ಜಬೀವುಲ್ಲಾ ಅವರು, ಸಚಿವರನ್ನು ಭೇಟಿ ಮಾಡಿ ವಸತಿ ರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಾಣ ಮಾಡಿಕೊಡುವ ಬಗ್ಗೆ ಮನವಿ ಸಲ್ಲಿಸಿದಾಗ, ವಸತಿ ಸಂಕೀರ್ಣ ನಿರ್ಮಾಣಕ್ಕೆ ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ನಗರದ ಹಲವೆಡೆ 2 ಬಿ ಎಚ್ ಕೆ ವಸತಿ ಸಂಕೀರ್ಣ ನಿರ್ಮಿಸಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಗೃಹಮಂಡಳಿ ಆಯುಕ್ತ ದಯಾನಂದ್,ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್, ಪ್ರಧಾನ ವ್ಯವಸ್ಥಾಪಕ ಪರಶುರಾಮ್ ಗೌಡ ಉಪಸ್ಥಿತರಿದ್ದರು.
ಮಂಡ್ಯ ಡಿಸಿಸಿ ಬ್ಯಾಂಕ್ ಕದನ ; 8 ಮಂದಿ ಅವಿರೋಧ ಆಯ್ಕೆ, 8 ಕ್ಷೇತ್ರಗಳಲ್ಲಿ ಚುನಾವಣೆ
ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ








