ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರು, ದಾವಣಗೆರೆ ಶಾಸಕರು ಹಾಗೂ ನನ್ನ ಮಾರ್ಗದರ್ಶಕರಾದ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿಯಿಂದ ಬಹಳ ನೋವುಂಟಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ವಿವಿಧ ಸರ್ಕಾರಗಳಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿ ಕೂಡ ಅಪಾರ ಕೊಡುಗೆ ನೀಡಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಭಗವಂತ ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಚಿವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಶಾಮನೂರು ಶಿವಶಂಕರಪ್ಪ ನಿಧನ: ಸ್ಪರ್ಶ್ ಆಸ್ಪತ್ರೆ ಮಾಧ್ಯಮ ಪ್ರಕಟಣೆ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam







