ಶಿವಮೊಗ್ಗ : ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಚಿವರು ಬಿಹಾರದ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳಿಂದ ಲೂಟಿ ಮಾಡುತ್ತಿದ್ದಾರೆ ಎಂದರು.
ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತ ಎಲ್ಲಾ ಇಲಾಖೆಯ ಮಂತ್ರಿಗಳು ವಸೂಲಿ ಮಾಡಿ ಬಿಹಾರ್ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೆ ತಲುಪಲ್ಲ, ಅದು ಎಲ್ಲಿ ತಲುಪಬೇಕೋ ಅಲ್ಲಿಗೆ ತಲುಪುತ್ತದೆ. ಬಿಹಾರದ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.