ಬೆಂಗಳೂರು: ರಾಜ್ಯ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ 2023-24 ನೇ ಸಾಲಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆÀ ಸಂಬಂಧಿಸಿದಂತೆ ಅಪ್ರೆಂಟಿಸ್ ಟೆಕ್ನೀಶಿಯನ್ ಟ್ರೈನಿಗಳ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪೆÇ್ಲೀಮಾ ಪಡೆದಿರಬೇಕು. ನಿಗಧಿತ ಶಿಕ್ಷಣಾರ್ಹತೆಯನ್ನು 2021 ಮೇ ತಿಂಗಳ ನಂತರ ಪಡೆದವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ (ಮೆರಿಟ್) ಹಾಗೂ ಮೀಸಲಾತಿ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಈಗಾಗಲೇ ಅಪ್ರೆಂಟಿಸ್ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ತರಬೇತಿಯ ಅವಧಿಯಲ್ಲಿ ಮಾಹೆಯಾನ ರೂ. 8,000/- ( ರೂ. 4000/- ಗಳನ್ನು ರಾಜ್ಯ ಸರ್ಕಾರದಿಂದ ಹಾಗೂ ರೂ. 4000 ಗಳನ್ನು ಅಪ್ರೆಂಟಿಸ್ ಬೋರ್ಡ್ರವರಿಂದ ನೇರವಾಗಿ ಟ್ರೈನಿಗಳ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ) ಪಾವತಿಸಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂಖ್ಯೆ – 11 ನೆಲಮಹಡಿ, ವಿಧಾನಸೌಧ, ಬೆಂಗಳೂರು- 560 001. ಇವರಿಗೆ ಫೆಬ್ರವರಿ 27 ರ ಒಳಗಾಗಿ ತಲುವುವಂತೆ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ಐ.ಡಿ ಮುಂತಾದ ವಿವರಗಳೊಂದಿಗೆ ಸಲ್ಲಿಸುವುದು. ಅರ್ಜಿಯೊಂದಿಗೆ ದೃಢೀಕರಿಸಲಾಗಿರುವ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು, ಲೈಬ್ರರಿ ಅಂಡ್ ಇನ್ರ್ಮೇಷನ್ ಸೈನ್ಸ್ನಲ್ಲಿ ಡಿಪೆÇ್ಲೀಮಾ ಹೊಂದಿರುವ ಬಗ್ಗೆ ಪ್ರಮಾಣಪತ್ರ, ಪ್ರಮಾಣ ಪತ್ರ/ ತಾತ್ಕಾಲಿಕ ಪ್ರಮಾಣ ಪತ್ರ (Provisional Certificate) ಗಳನ್ನು ಕಡ್ಡಾಯವಾಗಿ ಲಗತ್ತಿಸುವುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-22033462/3011 ಅಥವಾ ಇ-ಮೇಲ್ ವಿಳಾಸ ksecretariatlibrary@gmail.com ಕ್ಕೆ ಸಂಪರ್ಕಿಸಬಹುದು ಎಂದು ಸಚಿವಾಲಯ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಜ್ಯೋತಿಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.