ಶಿವಮೊಗ್ಗ: ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದನ್ನು ಅಪ್ರಾಪ್ತ ಬಾಲಕ ನಡೆಸಿರುವಂತ ಘಟನೆ ನಡೆದಿದೆ. ಹೀಗಾಗಿ ಅಪ್ರಾಪ್ತ ವಿದ್ಯಾರ್ಥಿಯ ವಿರುದ್ಧ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆಯ ವ್ಯಾಪ್ತಿಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿರೋದು ಬೆಳಕಿಗೆ ಬಂದಿದೆ. ಮಾಗಡಿಯಿಂದ ಸಾಗರ ನಗರಕ್ಕೆ ಪ್ರಥಮ ಪಿಯುಸಿ ವ್ಯಾಸಂಗ ಮಾಡೋದಕ್ಕೆ ಆಗಮಿಸುತ್ತಿದ್ದಂತ ಅಪ್ರಾಪ್ತನಿಗೆ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿನಿಯ ಪರಿಚಯವಾಗಿದ್ದಾಳೆ. ಇಂತಹ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರೋದಾಗಿ ಹೇಳಲಾಗುತ್ತಿದೆ.
ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತ 112ಗೆ ಬಾಲಕಿಯ ಪೋಷಕರು ಕರೆ ಮಾಡಿ ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತರನ್ನು ಠಾಣೆಗೆ ಕರೆತರಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಹೇಳಿಕೆ ಪಡೆದು ಅಪ್ರಾಪ್ತ ಆರೋಪಿಯ ವಿರುದ್ಧ ರೇಪ್ ಹಾಗೂ ಪೋಕ್ಸೋ ಕಾಯ್ದೆಯಡಿ ಸಾಗರ ಟೌನ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
BREAKING : ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar