ಸಂಭಾಲ್ (ಉತ್ತರ ಪ್ರದೇಶ): ಆರು ವರ್ಷದ ಬಾಲಕಿಯ ಮೇಲೆ ಧಾರ್ಮಿಕ ಶಿಕ್ಷಕನೋರ್ವ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, ಮಸೀದಿಯಲ್ಲಿ ಆಕೆಯ ಧಾರ್ಮಿಕ ಶಿಕ್ಷಕ ಮಂಗಳವಾರ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
ಆರೋಪಿಯು ಬಾಲಕಿಯನ್ನು ಮಸೀದಿ ಬಳಿಯ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.
ದೂರಿನ ಮೇರೆಗೆ ಐಪಿಸಿ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.