ಮಡಿಕೇರಿ: ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂತಹ ಘಟನೆಗಳನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.
ಅಂದಹಾಗೇ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಈ ಪ್ರಕರದಲ್ಲಿ ಆರೋಪಿ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.
BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ