ಬೆಂಗಳೂರು : B.Ed , D.ED ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಸೂಚನೆ ನೀಡಿದ್ದು , 2022-23 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು 10:12:2022 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕು ಅಲ್ಪಸಂಖ್ಯಾತ ಕಲ್ಯಾಣ ನಿಗಮವನ್ನು ಸಂಪರ್ಕಿಸಬಹುದಾಗಿದೆ.

BIGGNEWS: ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಆರ್‌ಎಸ್‌ಎಸ್‌ ನಾಯಕರಿಂದ ಕೇಂದ್ರ ಸರ್ಕಾರಕ್ಕೆ ಮನವಿ

HEALTH TIPS: ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಪ್ರತಿದಿನ ನಿಂಬೆ ಹುಲ್ಲನ್ನು ಈ ರೀತಿ ಬಳಸಿ | Lemon grass

Share.
Exit mobile version