ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು. ವಿದ್ಯಾರ್ಥಿಯ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷಗಳಿಗಿಂತ ಮೀರಿರಬಾರದು ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷಗಳಿಗಿಂತ ಮೀರಿರಬಾರದು.
ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು State Scholarship Portal ನ ವೆಬ್ಸೈಟ್ https://ssp.karnataka.gov.in ಅಥವಾ http:// dom.karnataka.gov.in (Directorate of Minorities-GOK) ನ ಮೂಲಕ ಜ.30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಾಲಾಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206 ನ್ನು ಸಂಪರ್ಕಿಸುವುದು.
BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ
ಶಕ್ತಿ ಯೋಜನೆಯಡಿ ಇದುವರೆಗೆ 139.36ಕೋಟಿ ಹೆಣ್ಣು ಮಕ್ಕಳ ಪ್ರಯಾಣ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್