ಮೈಸೂರು : ಮೈಸೂರಿನಲ್ಲಿ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಪಿರಿಯಾಪಟ್ಟಣದಲ್ಲಿ ವರದಿಯಾಗಿದೆ.
ಮೈಸೂರು ಜಿಲ್ಲೆ ಪಿರಿಯಾ ಪಟ್ಟಣದ ಸೆಂಟ್ ಮೆರೀಸ್ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬಾಲ ಏಸುವಿನ ಮೂರ್ತಿ, ತೊಟ್ಟಿಲು ಧ್ವಂಸ ಮಾಡಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಚರ್ಚ್ ನಲ್ಲಿ ಯಾರೂ ಇಲ್ಲದ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ, ಚರ್ಚ್ ಹೊರಗಿದ್ದ ಹುಂಡಿಯನ್ನು ಕೂಡ ಖದೀಮರು ಕದ್ದೊಯ್ದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
HEALTH TIPS: ಊಟ ಮಾಡುವಾಗ ನೀರು ಕುಡಿಯುವುದು ಆರೋಗ್ಯಕ್ಕೆ ಹಾನಿಕರ : ಇದರಿಂದಾಗುವ ಅನಾನೂಕೂಲಗಳ ಬಗ್ಗೆ ತಿಳಿಯಿರಿ